LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

2024ರಲ್ಲಿ ಟೆನಿಸ್‍ಗೆ ನಡಾಲ್ ವಿದಾಯ..?

ಮ್ಯಾಡ್ರಿಡ್: 2024ರ ಆವೃತ್ತಿಯ ಬಳಿಕ ಟೆನಿಸ್‍ಗೆ ವಿದಾಯ ಹಾಡುವರೇ ಎಂಬುದನ್ನು ಈಗಾಗಲೇ ಹೇಳಲು ಸಾಧ್ಯವಿಲ್ಲ ಸ್ಪೇನ್‍ನ ರಫೆಲ್ ನಡಾಲ್ ಸ್ಪಷ್ಟಪಡಿಸಿದ್ದಾರೆ.22 ಬಾರಿಯ ಗ್ರ್ಯಾನ್‍ಸ್ಲಾಮ್ ಚಾಂಪಿಯನ್ ನಡಾಲ್, ತಮ್ಮ ವೃತ್ತಿ ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ.

ಗಾಯದ ಸಮಸ್ಯೆಯಿಂದಲೂ ಅವರು ಹೊರತಾಗಿಲ್ಲ. ಇದರಿಂದಾಗಿ 37 ವರ್ಷದ ನಡಾಲ್, ದೀರ್ಘ ಸಮಯದಿಂದ ಟೆನಿಸ್ ಅಂಗಣದಿಂದ ಹೊರಗುಳಿದಿದ್ದಾರೆ.ಈ ಮಧ್ಯೆ ನಿವೃತ್ತಿ ಕುರಿತು ಪ್ರಶ್ನೆಗೆ, ಈಗಲೇ ನಿರ್ಧರಿಸುವುದು ಉಚಿತವಲ್ಲ ಎಂದು ಹೇಳಿದ್ದಾರೆ.ನಾನು ಈಗಲೇ ನಿವೃತ್ತಿ ಘೋಷಿಸಲು ಬಯಸುವುದಿಲ್ಲ. ಏಕೆಂದರೆ ಮುಂದೆ ಏನಾಗಬಹುದೆಂದು ಹೇಳಲು ಸಾಧ್ಯವಿಲ್ಲ. ನಾನೇ ನನಗೊಂದು ಅವಕಾಶ ನೀಡಬೇಕಿದೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಅನೇಕ ಸಲ ಪುನರಾಗಮನ ಮಾಡಿದ್ದೇನೆ. ದೈಹಿಕವಾಗಿ ಸಮರ್ಥವಾಗಿ ನನ್ನ ಆಟವನ್ನು ಆನಂದಿಸಲು ಪ್ರಾರಂಭಿಸಿದರೆ ನಾನು ಏಕೆ ಈಗಲೇ ನಿವೃತ್ತಿಗೆ ಕಾಲ ನಿಗದಿಪಡಿಸಲಿ? ಇದರಲ್ಲಿ ಯಾವುದೇ ಅರ್ಥವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ನಡಾಲ್, 11 ತಿಂಗಳ ಹಿಂದೆ ಆಸ್ಟ್ರೇಲಿಯನ್ ಓಪನ್‍ನಲ್ಲಿ ಕೊನೆಯದಾಗಿ ಸ್ಪರ್ಧಿಸಿದ್ದರು. ಅಂದು ಎರಡನೇ ಸುತ್ತಿನಲ್ಲಿ ಸೋಲು ಎದುರಾಗಿತ್ತು. ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ಆಸ್ಟ್ರೇಲಿಯನ್ ಓಪನ್‍ನಲ್ಲಿ ಆಡಲಿದ್ದಾರೆಯೇ ಎಂಬುದು ಕುತೂಹಲವೆನಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು