LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪೂರ್ಣಿಮಾ ರಾಮಕುಮಾರ್ ಅವರಿಂದ `ನಾದಯೋಗಿ ಡಾ||ರಾಜಕುಮಾರ್' ಪುಸ್ತಕ ಅನಾವರಣ

ವರನಟ ಡಾ||ರಾಜಕುಮಾರ್ ಅವರು ಅದ್ಭುತ ನಟರಷ್ಟೇ ಅಲ್ಲ. ಅದ್ಭುತ ಗಾಯಕರೂ ಕೂಡ. ಅವರ ಸುಮಧುರ ಕಂಠಕ್ಕೆ ಮನ ಸೋಲದವರೆ ಇಲ್ಲ. ಅಂತಹ ಅಪ್ರತಿಮ ಕಲಾವಿದ ಡಾ||ರಾಜಕುಮಾರ್ ಅವರ ಸಂಗೀತ ಜ್ಞಾನವನ್ನು ಪರಿಚಯಿಸುವ "ನಾದಯೋಗಿ ಡಾ||ರಾಜಕುಮಾರ್" ಎಂಬ ವಿಶೇಷ ಪುಸ್ತಕವನ್ನು ಆರ್ ಮಂಜುನಾಥ್ ಚವಾಣ್ ಹಾಗೂ ಡಾ||ಸೌಮ್ಯ ಮಂಜುನಾಥ್ ಚವಾಣ್ ಬರೆದಿದ್ದಾರೆ. ಇತ್ತೀಚೆಗೆ ಈ ಪುಸ್ತಕದ ಅನಾವರಣ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಪುಸ್ತಕವನ್ನು ಅನಾವರಣ ಮಾಡಿದರು. ಡಾ||ರಾಜಕುಮಾರ್ ಸಹೋದರ ವರದಪ್ಪ ಅವರ ಪುತ್ರಿ ಡಾ||ಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಲಹರಿ ಸಂಸ್ಥೆಯ ಮನೋಹರ ನಾಯ್ಡು, ಲಹರಿ ವೇಲು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಾವೇರಿ ಕನ್ನಡ ಸಂಘ ಧಾರ್ ಎಸ್ ಸಲಾಂ ತಾಂಜಾನಿಯಾ ಪೂರ್ವ ಆಫ್ರಿಕಾ ಪ್ರತಿನಿಧಿ ಗೌಡ ಅವರು ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು.
ಕನ್ನಡ ಚಿತ್ರ ರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಅವರ ಪುಸ್ತಕ ಪೂರ್ವ ಆಫ್ರಿಕಾಕ್ಕೆ ತಲುಪುತ್ತಿರುವುದು ನಾಡು ನುಡಿಯ ಹೆಮ್ಮೆಯ ಪ್ರತೀಕವಾಗಿದೆ. ಪುಸ್ತಕ ಅನಾವರಣ ಮಾಡಿ ಮಾತನಾಡಿದ ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್, ನಮ್ಮ ತಂದೆಗೆ ಸಂಗೀತವೆAದರೆ ಪ್ರಾಣ. ಗಜಲ್ ಬಹಳ ಇಷ್ಟ. ನಮ್ಮ ಮನೆಯಲ್ಲಿ ಎಲ್ಲರೂ ಸಂಗೀತ ಪ್ರೇಮಿಗಳೆ. ನಮ್ಮ ಕುಟುಂಬಕ್ಕೆ ಆತ್ಮೀಯರಾದ ಆರ್ ಮಂಜುನಾಥ್ ಹಾಗೂ ಸೌಮ್ಯ ಮಂಜುನಾಥ್ ಅವರು ಅಪ್ಪಾಜಿ ಅವರಿಗಿದ್ದ ಸಂಗೀತದ ಜ್ಞಾನವನ್ನು ಪರಿಚಯಿಸುವ ಈ ಪುಸ್ತಕವನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಅನಾವರಣ ಮಾಡಿದ್ದು ಬಹಳ ಖುಷಿಯಾಗಿದೆ ಎಂದರು.
1992 ಜೀವನ ಚೈತ್ರ ಚಿತ್ರದ ಸಂದರ್ಭದಲ್ಲಿ ಡಾ||ರಾಜಕುಮಾರ್ ಹಾಗೂ ಪಾರ್ವತಮ್ಮ ರಾಜಕುಮಾರ್ ಅವರ ಪರಿಚಯವಾಯಿತು. ಆನಂತರ ಅವರೊಂದಿಗೆ ಹತ್ತಿರದ ಒಡನಾಟವಿತ್ತು. ಡಾ||ರಾಜಕುಮಾರ್ ಅವರು ಬಹಳ ದೊಡ್ಡ ಸಂಗೀತ ಪ್ರೇಮಿ. ಅವರಿಗೆ ಸಂಗೀತದ ಎಲ್ಲಾ ಪ್ರಕಾರಗಳು ಗೊತ್ತಿತ್ತು. ಅವರ ಸಹೋದರ ವರದಪ್ಪ ಅವರು ಕೂಡ ಸಂಗೀತದ ಬಗ್ಗೆ ಅಪಾರ ಜ್ಞಾನವುಳ್ಳವರಾಗಿದ್ದರು. ಡಾ||ರಾಜಕುಮಾರ್ ಅವರಿಗೆ ಕರ್ನಾಟಕ ಸಂಗೀತ ಅಷ್ಟೇ ಅಲ್ಲದೆ ಹಿಂದೂಸ್ತಾನಿ ಸಂಗೀತ ಕೂಡ ಪ್ರಿಯ. ಅದರಲ್ಲೂ ಗಜಲ್ ಎಂದರೆ ತುಂಬಾ ಇಷ್ಟ. ಎಪ್ಪತ್ತು ವರ್ಷಗಳಾಗಿದ್ದರೂ ಸಂಗೀತದಲ್ಲಿ ತಮಗೆ ತಿಳಿಯದ ಕೆಲವು ಸಂಗತಿಗಳ ಬಗ್ಗೆ ತಿಳಿದವರಿಂದ ತಿಳಿದುಕೊಳ್ಳುವ ಉತ್ಸಾಹ. ಇದನೆಲ್ಲಾ ಹತ್ತಿರದಿಂದ ಕಂಡಿದ್ದ ನಾನು ಹಾಗೂ ನನ್ನ ಶ್ರೀಮತಿ ಸೌಮ್ಯ, ಡಾ||ರಾಜಕುಮಾರ್ ಅವರಿಗಿದ್ದ ಸಂಗೀತ ಜ್ಞಾನವನ್ನು ಪುಸ್ತಕ ರೂಪದಲ್ಲಿ ಎಲ್ಲರಿಗೂ ತಿಳಿಸಬೇಕು ಎಂಬ ಉದ್ದೇಶದಿಂದ "ನಾದಯೋಗಿ ಡಾ ರಾಜಕುಮಾರ್ " ಎಂಬ ಪುಸ್ತಕವನ್ನು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಬರೆದಿದ್ದೇವೆ. ರಾಜಕುಮಾರ್ ಅವರ ಪುತ್ರಿ ಪೂರ್ಣಿಮಾ ರಾಮ್ ಕುಮಾರ್ ಅವರು ಈ ಪುಸ್ತಕ ಅನಾವರಣ ಮಾಡಿಕೊಟ್ಟಿದ್ದು ಬಹಳ ಸಂತೋಷವಾಗಿದೆ. ಅವರಿಗೆ ಹಾಗೂ ಆಗಮಿಸಿರುವ ಗಣ್ಯರಿಗೆ ಧನ್ಯವಾದ. 7.5.1954 ರಾಜಕುಮಾರ್ ಅಭಿನಯದ ಮೊದಲ ಚಿತ್ರ "ಬೇಡರ ಕಣ್ಣಪ್ಪ" ಬಿಡುಗಡೆಯಾಗಿತ್ತು. ಕಾಕತಾಳೀಯವಾಗಿ ಇಂದು 7.5.2026 ನಮ್ಮ "ನಾದಯೋಗಿ ಡಾ||ರಾಜಕುಮಾರ್" ಪುಸ್ತಕ ಅನಾವರಣವಾಗಿದೆ ಎಂದು ಪುಸ್ತಕ ಲೇಖಕ ಆರ್ ಮಂಜುನಾಥ್ ಚವಾಣ್ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು