LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅಪಾರ

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ಅವರು ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆಯೊಂದಿಗೆ, ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯವನ್ನು ವಿಸ್ತರಿಸಿದರು. ಕಮಲಾಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದರು.

ವಿಶ್ವವಿದ್ಯಾಲಯ ಅಧ್ಯಯನ ಪೀಠಗಳ ಅಧ್ಯಕ್ಷರು ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾಹಂಪನಾ, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು ರಚನೆ ಮಾಡಿದರು. ಕಥಾಸಂಕಲನಗಳು, ವಚನ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿ ರಚಿಸಿದರು. ಕಮಲಾ ಹಂಪನಾ ಅವರ ಸಾಧನೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಎಂದರು.

ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಜೈನಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಕಮಲಾಹಂಪನಾ ಅವರು ಜೈನ ಧರ್ಮ ಮತ್ತು ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು. ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯದ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕನ್ನಡಿಗರು ಗೌರವಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹೋರಾಟಗಾರರಾದ ಸಂಜೀವನಾಯಕ್, ಗುರುರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಕನ್ನಡ ಜಾಗೃತ ಪರಿಷತ್ತು ಗೌರವ ಅಧ್ಯಕ್ಷೆ ಸುಲೋಚನಮ್ಮ ವೆಂಕಟರೆಡ್ಡಿ, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಎಚ್.ಮುನಿಪಾಪಣ್ಣ, ಸ್ಕೌಟ್ಸ್ ದತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕವಿ ಶ್ರೀನಿವಾಸ ವಾಣಿಗಾರಹಳ್ಳಿ, ಕನ್ನಡ ಜಾಗೃತ ಪರಿಷತ್ತು ಮತ್ತು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು