LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಫ್ರಾಡ್‌ ಋಷಿ" ಬಗ್ಗೆ ನಮ್‌ ಋಷಿ ಮಾತು

`ಒಳಿತು ಮಾಡು ಮನುಸ" ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ "ಫ್ರಾಡ್ ಋಷಿ" ಚಿತ್ರದ ಎರಡನೇ ಹಾಡು "ಇವನೇ ಇವನೇ ಫ್ರಾಡು ಋಷಿ" ಇತ್ತೀಚೆಗೆ ಬಿಡುಗಡೆಯಾಗಿದೆ. ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ
ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ, ಒಳ್ಳೆಯ ತಂಡ ಬೇಕು. ಒಳ್ಳೆಯ ತಂಡವೆAದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು.

ಮಧು, ಸೋಮಶೇಖರ್, ಹರಿಕೃಷ್ಣ, ಮಂಜುನಾಥ್ ಮುಂತಾದವರ ಸಹಕಾರದಿಂದ ಈ ಚಿತ್ರ ರೂಪುಗೊಳ್ಳುತ್ತಿದೆ. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಶನ್‌ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಇನ್ನೊಂದು ಪ್ಯಾಶನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು
ಚಿತ್ರ ಮಾಡುತ್ತಿದ್ದೇನೆ.

ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್ ೧೦ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್ ಚಿತ್ರವಲ್ಲ. ಆದರೆ, ಕಂಟೆAಟ್ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‌ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಯಾಕೆ ಅಷ್ಟೊಂದು ಜನ ಎಂದು ಚಿತ್ರ ನೋಡಿದರೆ ಗೊತ್ತಾಗುತ್ತದೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ÷್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ. ಹಾಡುಗಳಿಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಕೆ.ಮಂಜು ಅವರಿಗೆ ಧನ್ಯವಾದ ಎಂದು ನಮ್ ಋಷಿ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು