LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ನಂದಿನಿ ಮಿಲ್ಕ್ ಪಾರ್ಲರ್ ಅಗ್ನಿ ಅವಘಡ ಮಾಲೀಕನಿಗೆ ಹೃದಯಾಘಾತ

ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ. ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ವೆಂಕಟೇಶ್, ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಅಂಗಡಿ ಮುಂಭಾಗದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಯತ್ನಿಸಿದ್ದರು. ಆದರೆ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವೆಂಕಟೇಶ್ ಅವರು ಹಲವು ವರ್ಷಗಳಿಂದ ಇದೇ ನಂದಿನಿ ಮಿಲ್ಕ್ ಪಾರ್ಲರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಹಠಾತ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು