LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನನಗಿಂತಲೂ ನರೇಂದ್ರ ಮೋದಿ ದೈವಭಕ್ತರು: ಹೆಚ್‍ಡಿಡಿ

ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಇಂದು ಕುಟುಂಬ ಸಮೇತರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾರೆ. ಬೆಂಗಳೂರಿನ ಹೆಚ್‍ಎಎಲ್ ವಿಮಾನನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಅವರು, ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದರು.

ಅಯೋಧ್ಯೆಯ ಶ್ರೀ ರಾಮನ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಅತೀವ ಸಂತಸ ತಂದಿದೆ. ಇಂದು ಹಿಂದೂಗಳ ಪವಿತ್ರ ಸ್ಥಳವಾಗಿ ಮಾರ್ಪಾಡು ಆಗುವುದರಲ್ಲಿ ಅನುಮಾನವಿಲ್ಲ. ನಾನು ಕೂಡ ದೈವಭಕ್ತ. ಹೀಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ನಾನು ನನ್ನ ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ. ಕುಮಾರಸ್ವಾಮಿ, ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪ್ರಯಾಣ ಬೆಳೆಸುತ್ತಿದ್ದೇವೆ ಎಂದರು.

ಇನ್ನು ನನಗಿಂತಲೂ ನರೇಂದ್ರ ಮೋದಿ ದೈವಭಕ್ತ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು ತಿಳಿಸಿದ್ದು, ನಾನು ದೈವಭಕ್ತನೇ. ಆದ್ರೆ, ನರೇಂದ್ರ ಮೋದಿ ನನಗಿಂತ ದೈವಭಕ್ತ. ಕಳೆದ 11 ದಿನಗಳಿಂದಲೂ ವ್ರತ ಆಚರಣೆ ಮಾಡುತ್ತಾ, ಉಪವಾಸ ಸೇರಿದಂತೆ ನಾಳೆ ಸರಯೂ ನದಿಯಲ್ಲಿ ಸ್ನಾನ ಮುಗಿಸಿ, ರಾಮನ ದರ್ಶನ ಮಾಡಲಿದ್ದಾರೆ. ಅವರ ನನಗಿಂತ ದೈವಭಕ್ತರು ಎಂದು ದೇವೇಗೌಡರು ಪ್ರಧಾನಿಗಳನ್ನು ಹಾಡಿ ಹೊಗಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು