LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

"ರಾಷ್ಟ್ರೀಯ ಹೆದ್ದಾರಿ ೨೧೮ ಬಂದ್ ಕಬ್ಬಿಗೆ ಬೆಲೆ ನಿಗದಿಗಾಗಿ ಮುಂದುವರೆದ ರೈತರ ಪ್ರತಿಭಟನೆ"

ಬೆಂಗಳೂರು/ಬಾಗಲಕೋಟೆ: ಒಂದು ಟನ್ ಕಬ್ಬಿಗೆ ೩೫೦೦ ರೂಪಾಯಿ ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆಯ ಗದ್ದನಕೇರಿ ಕ್ರಾಸ್‌ನಲ್ಲಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಸುಮಾರು ೯ ದಿನಗಳಿಂದ ಕಬ್ಬು ಬೆಲೆಯ ಕುರಿತು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಪ್ರತಿಭಟನಾನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಮಾಲೀಕರೊಂದಿಗೆ ರೈತರ ಸಂಧಾನ ಏರ್ಪಡಿಸಿ ಸಮಸ್ಯೆ ಬಗೆಹರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.

ಇಂದು ರಾಷ್ಟ್ರೀಯ ಹೆದ್ದಾರಿ ೨೧೮ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಕೂತು ರೈತರ ಪ್ರತಿಭಟನೆ ಮಾಡುತ್ತಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಟ್ರ್ಯಾಕ್ಟರ್ ಸೇರಿ ಹಲವು ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗದ್ದನಕೇರೆ ಕ್ರಾಸನ್‌ಲ್ಲಿ ಪೊಲೀಸರು ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದ್ದು, ಸ್ಥಳದಲ್ಲಿ ೪ ಡಿಎಆರ್ ವಾಹನ ಇರಿಸಿದ್ದು, ರೈತರ ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಬ್ಬು ಬೆಳೆಗಾರರ ಪ್ರತಿಭಟನೆಗೆ ಬೆಂಬಲಿಸಿ ಕರವೇ ಶಿವರಾಮೇಗೌಡ ಬಣದಿಂದ ರಾಜಾಜಿನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಫಿಲ್ಮ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಪಾಲ್ಗೊಂಡಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು