LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ: ಹಲವು ಕುಟುಂಬಗಳ ಅಭಿವೃದ್ಧಿ

ದೇವನಹಳ್ಳಿ ಗ್ರಾಮೀಣ- ಪ್ರದೇಶದ ಬಡ ಹಾಗೂ ಕಡುಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವನ್ನು ಅನುಷ್ಠಾನಗೊಳಿಸ ಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಸ್ವಸಹಾಯ ಗುಂಪುಗಳನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರುವ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಾಗಿ ಸಮುದಾಯ ಸಂಸ್ಥೆಗಳನ್ನು ಬಲಪಡಿಸಿ ಮಹಿಳೆಯರಿಗೆ ಜೀವನೋಪಾಯವಷ್ಟೇ ಅಲ್ಲದೆ ಅವರ ಕುಟುಂಬಗಳ ಅಭಿವೃದ್ಧಿಗಾಗಿ ಸಮಗ್ರ ಸೇವೆಗಳನ್ನು ಒದಗಿಸುವ ವೇದಿಕೆಗಳಾಗಿ ನಿರ್ಮಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು 652 ವಾರ್ಡ್ ಮಟ್ಟದ ಒಕ್ಕೂಟಗಳನ್ನು ರಚಿಸಿ, 5439 ಸ್ವಸಹಾಯ ಗುಂಪಿನ 67420 ಸದಸ್ಯರನ್ನು ಒಕ್ಕೂಟದ ವ್ಯಾಪ್ತಿಗೆ ತರಲಾಗಿರುತ್ತದೆ. ಸದರಿ ಸ್ವಸಹಾಯ ಗುಂಪುಗಳಲ್ಲಿ ಸಂಘಟನೆಗೊಳ್ಳುವ ಮೂಲಕ ನಿರಂತರ ಉಳಿತಾಯ, ನಿರಂತರ ಸಭೆ ಸೇರುವುದು ಮುಂತಾದ ದಶ ಸೂತ್ರಗಳನ್ನು ಪಾಲಿಸಿ ಅಭಿಯಾನದ ಬೆಂಬಲದೊಂದಿಗೆ ಒಂದಕ್ಕಿಂತ ಹೆಚ್ಚು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ವರ್ಷಕ್ಕೆ ಕನಿಷ್ಠ 1.00 ಲಕ್ಷ ಆದಾಯವನ್ನು ಗಳಿಸುವತ್ತ ದಿಟ್ಟ ಹೆಜ್ಜೆಗಳ ಇಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ 2435 ಸ್ವಸಹಾಯ ಗುಂಪುಗಳಿಗೆ ರೂ.46.74 ಕೋಟಿಗಳ ಸಮುದಾಯ ಬಂಡವಾಳ ನಿಧಿಯನ್ನು ಸಾಲವಾಗಿ ಕೃಷಿ, ಕೃಷಿಯೇತರ ಹಾಗೂ ಸೇವಾ ವಲಯದ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು ಜೀವನ ಮಟ್ಟದ ಸುಧಾರಣೆಗೆ ಸಹಕಾರಿಯಾಗಿದೆ.

ಜಿಲ್ಲೆಯ 101 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ರೂ.101.00 ಲಕ್ಷಗಳ ದುರ್ಬಲ ವರ್ಗದವರ ನಿಧಿಯನ್ನು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ಬಿಡುಗಡೆ ಮಾಡಲಾಗಿರುತ್ತದೆ.ಗ್ರಾಮೀಣ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ವನ್ ಧನ್ ವಿಕಾಸ ಕೇಂದ್ರಗಳು, ಆರಂಭಿಕ ಗ್ರಾಮೀಣ ಉದ್ದಿಮೆಗಳ ಯೋಜನೆ, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಜೊತೆಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಕನಿಷ್ಠ 2 ಜೀವನೋಪಾಯ ಚಟುವಟಿಕೆಗಳನ್ನು ಹೊಂದುವಲ್ಲಿ ಅಭಿಯಾನದ ನಿರಂತರ ಶ್ರಮ ಶ್ಲಾಘನೀಯವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳೊಂದಿಗೆ ಒಡಂಬಡಿಕೆಯನ್ನು ಕೈಗೊಂಡು, ಸ್ವಸಹಾಯ ಗುಂಪುಗಳ ಸದಸ್ಯರ ಮೂಲಕ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ತ್ಯಾಜ್ಯ ಸಾಗಾಣಿಕೆಗೆ ಬಳಕೆ ಮಾಡುತ್ತಿರುವ ಸ್ವಚ್ಛತಾ ವಾಹಿನಿಯ ಚಾಲನೆಯನ್ನು ಗ್ರಾಮೀಣ ಮಹಿಳೆಯರ ಮೂಲಕ ನಿರ್ವಹಣೆ ಮಾಡಲು ದಿಟ್ಟ ಹೆಜ್ಜೆ ಹಿಡಲಾಗಿರುತ್ತದೆ. 111 ಗ್ರಾಮೀಣ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮೂಲಕ ನಿರ್ವಹಣೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಮಹಿಳೆಯರಿಗೆ ಜೀವನೋಪಾಯಕ್ಕೆ ಸಹಕಾರಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು