LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಎನ್‍ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಬಿರುಸಿನ ಪ್ರಚಾರ

ರಾಮನಗರ: ಬಿಡದಿ ಪುರಸಭಾ ವ್ಯಾಪ್ತಿಯ ವಾರ್ಡ್ 9, 10, 11ನೇ ವಾರ್ಡ್‍ಗಳಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‍ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಪುರಸಭಾ ಸದಸ್ಯ ಲೋಹಿತ್‍ಕುಮಾರ್ ಬಿ.ಜೆ. ನೇತೃತ್ವದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರುಗಳು ಮಂಗಳವಾರ ಬಿರುಸಿನ ಮತಯಾಚನೆ ಮಾಡಿದರು.

ಬಿಡದಿ ಪಟ್ಟಣದಲ್ಲಿರುವ ಬಿಜಿಎಸ್ ವೃತ್ತದಲ್ಲಿ ಡಾ.ಭಾಲಗಂಗಾಧರನಾಥಸ್ವಾಮೀಜಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮನೆಮನೆ ಪ್ರಚಾರ ನಡೆಸಿದ ವೇಳೆ ಪುರಸಭಾ ಸದಸ್ಯ ಲೋಹಿತ್‍ಕುಮಾರ್ ಬಿ.ಜೆ. ಮಾತನಾಡಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‍ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಸರಳ, ಸಜ್ಜನಿಕೆಯ ವ್ಯಕ್ತಿತ್ವ ಉಳ್ಳವರಾಗಿದ್ದು, ಮತದಾರರು ಒಪ್ಪುವ ಉತ್ತಮ ಅಭ್ಯರ್ಥಿಯಾಗಿದ್ದಾರೆ.

ಅಲ್ಲದೆ ಮನಸ್ಸಿನಲ್ಲಿ ಉಳಿದಿರುವ ಒಬ್ಬ ಸಹೃದಯವಂತರಾಗಿದ್ದಾರೆ, ಈ ಚುನಾವಣೆ ಜನತೆಯ ಚುನಾವಣೆಯಾಗಿ ಮಾರ್ಪಟ್ಟಿದ್ದು, ಅವರ ಸ್ಪರ್ಧೆಯಿಂದ ಈ ಕ್ಷೇತ್ರದತ್ತ ಎಲ್ಲರ ಗಮನ ಸೆಳೆಯುವ ಮೂಲಕ ಹೆಚ್ಚು ಮಹತ್ವ ಪಡೆದಿದೆ ಎಂದರು.ಮಾಗಡಿ ವಿಧಾನಸಭಾ ಕ್ಷೇತ್ರದಾಧ್ಯಂತ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಒಟ್ಟಾಗಿ ಸೇರಿ ವಾರ್ಡಿನ ಎಲ್ಲ ಮನೆಗಳಿಗೆ ತೆರಳಿ ಮತಯಾಚನೆ ಮಾಡಿ ಮೈತ್ರಿ ಅಭ್ಯರ್ಥಿಗೆ ಮತ ಕೇಳುತ್ತಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಜೆಡಿಎಸ್ ವರಿಷ್ಟರಾದ ಎಚ್.ಡಿ.ದೇವೇಗೌಡ ಅವರ ಕೊಡುಗೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು, ಎ.ಮಂಜುನಾಥ್ ಅವರು ಶಾಸಕರಾಗಿದ್ದಾಗ ಕೈಗೊಂಡ ಅಭಿವೃದ್ದಿ ಕಾರ್ಯಗಳನ್ನು ಜನರು ಒಪ್ಪಿದ್ದಾರೆ. ಆಗಾಗಿ ಪಕ್ಷಾತೀತವಾಗಿ ಮತದಾರರು ಮೈತ್ರಿ ಅಭ್ಯರ್ಥಿಯ ಪರ ಒಲವು ತೋರುತ್ತಿದ್ದು, ಈ ಚುನಾವಣೆಯಲ್ಲಿ ಮಂಜುನಾಥ್ ಗೆಲುವು ನಿಶ್ಚಿತ ಎಂದು ತಿಳಿಸಿದರು.

ಮತ ಪ್ರಚಾರದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಲ್.ಚಂದ್ರು, ಹಿರಿಯ ಮುಖಂಡ ಚಿಕ್ಕಣ್ಣಯ್ಯ, ಬಿಡದಿ ಪುರಸಭಾ ಸದಸ್ಯರಾದ ಹರಿಪ್ರಸಾದ್, ರಮೇಶ್ ಕೆ.ಎನ್, ಮಾಜಿ ಸದಸ್ಯ ಬಿ.ಎಂ. ರಮೇಶ್‍ಕುಮಾರ್, ಮುಖಂಡರಾದ ಆಯಿಷಖಲೀಲ್, ವಿನಾಯಕಸ್ವಾಮಿ, ಗುರುಲಿಂಗಯ್ಯ, ಅನಂತು, ಗಿರೀಶ್‍ಗೌಡ, ಬಾನಂದೂರುಪ್ರಸನ್ನ, ರಾಜೇಶ್ ಬನ್ನಿಕುಪ್ಪೆ, ಸಂದೀಪ್, ಪೋಲೀಸ್‍ರೇವಣ್ಣ ಸೇರಿದಂತೆ ಹಲವರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು