ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಅಧಿಕ ಮತಗಳ ಅಂತರದಿAದ ಭರ್ಜರಿ ಜಯಗಳಿಸಿರುವ ಶ್ರೀ ಎ.ಪಿ. ರಂಗನಾಥ್ ಅವರಿಗೆ ಮಹಾಲಕ್ಷಿ÷್ಮ ಲೇಔಟ್ ಕ್ಷೇತ್ರದ ಮಾನ್ಯ ಶಾಸಕರಾದ ಕೆ. ಗೋಪಾಲಯ್ಯ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ನಾಗಪುರ ವಾರ್ಡ್ನಲ್ಲಿರುವ ಮಾನ್ಯ ಶಾಸಕರ ಕಚೇರಿಯಲ್ಲಿ ವಿಜಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ವಿಧಾನ ಪರಿಷತ್ ಸದಸ್ಯ ಹಾಗೂ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು, ತಮಗೆ ಟಿಕೆಟ್ ಘೋಷಣೆಯಾದ ಕೂಡಲೇ ಪ್ರಥಮವಾಗಿ ಶಾಸಕ ಕೆ. ಗೋಪಾಲಯ್ಯ ಅವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆದಿದ್ದೆ ಎಂದು ಸ್ಮರಿಸಿದರು. ಗೋಪಾಲಯ್ಯ ಅವರ ಸಲಹೆಯಂತೆ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ಶಾಸಕರು ಹಾಗೂ ಮುಖಂಡರನ್ನು ಒಗ್ಗೂಡಿಸಿ, ಒಗ್ಗಟ್ಟಿನಿಂದ ನಡೆಸಿದ ಪ್ರಚಾರದಿಂದಲೇ ಈ ಐತಿಹಾಸಿಕ ಜಯ ಸಾಧಿಸಲು ಸಾಧ್ಯವಾಯಿತು ಎಂದು ತಿಳಿಸಿದರು.ಈ ಗೆಲುವು ಕೇವಲ ಎಪಿ ರಂಗನಾಥ್ ಅವರ ಅಥವಾ ಎನ್‌ಡಿಎ ಮೈತ್ರಿಕೂಟದ ಗೆಲುವಷ್ಟೇ ಅಲ್ಲ; ಆಡಳಿತರೂಢ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸ್ಥಾನವನ್ನು ವಾಪಸ್ ಪಡೆದಿರುವುದು ರಾಷ್ಟçಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ಹೆಚ್.ಡಿ. ದೇವೇಗೌಡರ ನಾಯಕತ್ವಕ್ಕೆ ಸಿಕ್ಕ ದೊಡ್ಡ ಜಯವಾಗಿದೆ ಎಂದು ಬಣ್ಣಿಸಿದರು. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಶಾಸಕ ಗೋಪಾಲಯ್ಯ ಅವರು ಕಳೆದ 12 ವರ್ಷಗಳಿಂದ ನಿರಂತರವಾಗಿ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುತ್ತಾ ಬಂದಿರುವುದು ಮತ್ತು ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ಧಿ ಕಾರ್ಯಗಳು ಶಿಕ್ಷಕರಿಗೆ ಮನೆಮಾತಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಶಿಕ್ಷಕರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ. ಗೋಪಾಲಯ್ಯ ಅವರು, ಚುನಾವಣಾ ಸಂದರ್ಭದಲ್ಲಿ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಶಿಕ್ಷಕರೊಂದಿಗೆ ನಡೆಸಿದ ಮಾತುಕತೆ ಯಿಂದ ಎನ್‌ಡಿಎ ಅಭ್ಯರ್ಥಿಯ ಗೆಲುವು ನಿಶ್ಚಿತವಾಗಿತ್ತು ಎಂದರು.