LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎನ್‍ಡಿಎಗೆ ಬಹುಮತ ಬರಲ್ಲ ಇಂಡಿಯಾ ಮೈತ್ರಿಕೂಟಕ್ಕೆ ಜನಬೆಂಬಲ: ಸಿಎಂ

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಎನ್ ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿ ಕೂಟಕ್ಕೆ ಬಹುಮತ ದೊರೆಯಲಿದೆ ಎಂದಿದ್ದಾರೆ.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 400 ಕ್ಕೂ ಹೆಚ್ಚು ಸ್ಥಾನಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಎಂದರು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಉತ್ತರಿಸಲಿ ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದು ಒತ್ತಾಯಿಸಿದರು.

ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯವನ್ನು ಇದೇ ಸಂದರ್ಭದಲ್ಲಿ ಶಾಘಿಸಿದರು. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು