LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ದಿಲ್ ಖುಷ್" ಚಿತ್ರದ "ನೀನೇ ನೀನೇ" ಹಾಡು ಬಿಡುಗಡೆ

ಖ್ಯಾತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ, ಬಹದ್ದೂರ್ ಚೇತನ್ ಕುಮಾರ್ ಅವರಿಂದ ಸುಂದರ ಹಾಡಿನ ಅನಾವರಣ
ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ "ದಿಲ್ ಖುಷ್" ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರದಿರುವ "ನೀನೇ ನೀನೇ" ಎಂಬ ಸುಮಧುರ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ.

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿದರು. "ಸರಿಗಮಪ" ಖ್ಯಾತಿಯ ನಿಹಾಲ್ ತೌರೊ ಹಾಗೂ ಆರತಿ ಅಶ್ವಿನ್ ಈ ಹಾಡಿಗೆ ಧ್ವನಿಯಾಗಿದ್ದು ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.

ಚಿತ್ರದ ಹಾಡುಗಳು ಹಾಗೂ ಟೀಸರ್ ತುಂಬಾ ಚೆನ್ನಾಗಿದೆ. ಪ್ರಮೋದ್ ಜಯ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿದ್ದಾರೆ. ಹಾಡುಗಳು ಹಾಗೂ ಟೀಸರ್ ಮೂಲಕ ಪ್ರಮೋದ್ ಜಯ ಭರವಸೆ ಮೂಡಿಸಿದ್ದಾರೆ. ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿರುವ ವಿಶ್ವಾಸ ನಮಗಿದೆ. ಉತ್ತಮ ಕಥೆಗಳಿರುವ ಚಿತ್ರಗಳು ಕನ್ನಡದಲ್ಲಿ ಹೆಚ್ಚು ಬರುತ್ತಿದೆ. ದಯವಿಟ್ಟು ಜನ ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬನ್ನಿ.

ಆಗ ಮಾತ್ರ ಚಿತ್ರಗಳು ಯಶಸ್ಸಿಯಾಗಲು ಸಾಧ್ಯ ಎಂದರು ಅತಿಥಿಗಳಾಗಿ ಆಗಮಿಸಿದ್ದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗು ಬಹದ್ದೂರ್ ಚೇತನ್ ಕುಮಾರ್. ನಾನು ಸಿಂಪಲ್ ಸುನಿ ಅವರ ಹತ್ತಿರ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಸಾಕಷ್ಟು ಕೆಲಸ ಕಲಿತ್ತಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಹಾಡು ಬಿಡುಗಡೆ ಮಾಡಿಕೊಟ್ಟ ಮೂರು ಜನ ನಿರ್ದೇಶಕರಿಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಪ್ರಮೋದ್ ಜಯ ತಿಳಿಸಿದರು.

ಈ ಚಿತ್ರದಲ್ಲಿ ಖುಷ್ ನನ್ನ ಹೆಸರು. ಲವಲವಿಕೆ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರಂಜಿತ್. ದಿಲ್ಮಯ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಸ್ಪಂದನ ಸೋಮಣ್ಣ. ನಟರಾದ ಧರ್ಮಣ್ಣ, ರಘು ರಾಮನಕೊಪ್ಪ ಮಂತಾದ ಕಲಾವಿದರು ಹಾಗೂ ಚಿತ್ರತಂಡದ ಸದಸ್ಯರು "ದಿಲ್ ಖುಷ್" ಚಿತ್ರದ ಬಗ್ಗೆ ಮಾತನಾಡಿದರು.ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ "ದಿಲ್ ಖುಷ್" ಚಿತ್ರವನ್ನು ನಿರ್ಮಿ ಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು