LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಹೊಸ ಅತಿಥಿ ಆಗಮನ ಆಗಿದೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ರೂಪಾ ಎಂಬ ಹೆಣ್ಣು ಆನೆಯೊಂದು ಮುದ್ದಾದ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ.

ಆನೆ ಮರಿ ಆಗಮನದಿಂದ ಬನ್ನೇರುಘಟ್ಟ ಆನೆಗಳ ಸಂಖ್ಯೆ 25ಕ್ಕೇರಿದೆ. ರೂಪಾ ಜನನ ನೀಡುತ್ತಿರುವ ಮೂರನೇ ಮರಿ ಇದಾಗಿದೆ. ಮರಿ ಆನೆ ಸುಮಾರು 120 ಕೆ.ಜಿ ತೂಕ ಇದ್ದು ಆರೋಗ್ಯವಾಗಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದ್ದಾರೆ.

ರೂಪಾ ಜನ್ಮ ನೀಡಿದ ಮರಿಯಾನೆ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಆನೆ ಸಫಾರಿಗೆ ಬರುವ ಪ್ರವಾಸಿಗರು ಮರಿಯ ಚೆಲ್ಲಾಟ ಕಣ್ಣುಂಬಿಕೊಂಡು ಖುಷಿಪಡುತ್ತಿದ್ದಾರೆ.ಆನೆ ಸಫಾರಿ ಸೀಗೇಕಟ್ಟೆ ಬಳಿ ಇರುವ ಆನೆ ಕುಟುಂಬದಲ್ಲಿ ಮರಿಯಾನೆಗೆ ತಾಯಿ ರೂಪಾ, ಅಕ್ಕ ಗೌರಿ, ಆನೆಗಳಾದ ರೀಟಾ, ವೇದಾ ಮರಿಗೆ ಓಡಾಡುವ ತರಬೇತಿ ನೀಡುತ್ತಿವೆ.

ಆನೆ ಕುಟುಂಬದ ಆರೈಕೆ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ವೈದ್ಯಡಾ.ಕಿರಣ್ ಮತ್ತು ಅರ್‍ಎಫ್‍ಒ ದಿನೇಶ್ ಮಾರ್ಗದರ್ಶನದಲ್ಲಿ ಮಾವುತ ಕೆ.ರಾಜಣ್ಣ ತಾಯಿ ಮತ್ತು ಮರಿ ಅನೆಯನ್ನು ಪ್ರಾಣಿಪಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಉದ್ದು, ಅವಲಕ್ಕಿ, ಕಡಲೆಕಾಳು, ಹೆಸರಕಾಳು, ತೆಂಗಿನಕಾಯಿ ಸೇರಿದಂತೆ ವಿಶೇಷ ಆಹಾರ ನೀಡಲಾಗುತ್ತಿದೆ ಎಂದು ಉದ್ಯಾನದ ಆನೆ ಮೇಲ್ವಿಚಾರಕ ಸುರೇಶ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು