ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮತ್ತೊಮ್ಮೆ ತಮ್ಮ ಅಬ್ಬರದ ಬ್ಯಾಟಿಂಗ್ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಭಾನುವಾರ (ನವೆಂಬರ್ 22, 2026) ಭರ್ಜರಿ ಶತಕ ಸಿಡಿಸುವ ಮೂಲಕ, ಎಲ್ಲಾ ನಾಲ್ಕು ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇ ಲಿಯಾ) ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಭಾರತದ ಹಾಗೂ ಏಷ್ಯಾದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂರು ತಿಂಗಳ ಗಾಯದ ವಿರಾಮದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ರಿಷಭ್ ಪಂತ್, ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಕಿವೀಸ್ ಬೌಲರ್‌ಗಳ ಬೆವರಿಳಿಸಿದರು. ಕೇವಲ 153 ಎಸೆತಗಳಲ್ಲಿ 10 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 128 ರನ್ ಚಚ್ಚಿದರು. 99 ರನ್ ಗಳಿಸಿದ್ದಾಗ ಗ್ಲೆನ್ ಫಿಲಿಪ್ಸ್ ಎಸೆತದಲ್ಲಿ ಮುನ್ನುಗ್ಗಿ ಮಿಡ್-ಆಫ್ ಮೇಲಿಂದ ಸಿಕ್ಸರ್ ಸಿಡಿಸುವ ಮೂಲಕ, ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಶತಕ ಪೂರೈಸಿದರು.ಈ ಶತಕದೊಂದಿಗೆ ಪಂತ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಎಲ್ಲಾ ನಾಲ್ಕು ಸೆನಾ ದೇಶಗಳಲ್ಲಿ ಶತಕ ಗಳಿಸಿದ ವಿಶ್ವದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಆಸ್ಟೆçÃಲಿಯಾದ ಆಡಂ ಗಿಲ್‌ಕ್ರಿಸ್ಟ್ ಮತ್ತು ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ ಮಾತ್ರ ಈ ಸಾಧನೆ ಮಾಡಿದ್ದರು. ಅಲ್ಲದೆ, ಮೊಹಮ್ಮದ್ ಅಝರುದ್ದೀನ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ನಂತರ ಎಲ್ಲಾ ನಾಲ್ಕು ಸೆನಾ ದೇಶಗಳಲ್ಲಿ ಶತಕ ಬಾರಿಸಿದ ಆರನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಂತ್ ಪಾತ್ರರಾಗಿದ್ದಾರೆ.ಪಂಟರ್ ಪಂತ್ ದಾಖಲೆಗಳು: ಈ ಇನ್ನಿಂಗ್ಸ್ನಲ್ಲಿ ಸಿಡಿಸಿದ 6 ಸಿಕ್ಸರ್‌ಗಳೊಂದಿಗೆ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 108 ಸಿಕ್ಸರ್ ಪೂರೈಸಿದರು. ಈ ಮೂಲಕ ನ್ಯೂಝಿಲೆಂಡ್‌ನ ಬ್ರೆಂಡನ್ ಮೆಕಲಮ್ (107) ಅವರ ದಾಖಲೆಯನ್ನು ಮುರಿದು, ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಎರಡನೇ ಆಟಗಾರ ಎನಿಸಿಕೊಂಡರು. ತಮ್ಮ ವೃತ್ತಿಜೀವನದ 9ನೇ ಟೆಸ್ಟ್ ಶತಕ ದಾಖಲಿಸಿದ ಪಂತ್, ವಿಕೆಟ್ ಕೀಪರ್ ಆಗಿ ಅತಿ ಹೆಚ್ಚು ಶತಕ ಗಳಿಸಿದವರ ಪಟ್ಟಿಯಲ್ಲಿ ಆಡಂ ಗಿಲ್‌ಕ್ರಿಸ್ಟ್ (17) ಮತ್ತು ಆಂಡಿ ಫ್ಲವರ್ (12) ನಂತರ ಮೂರನೇ ಸ್ಥಾನದಲ್ಲಿದ್ದಾರೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 3,000 ರನ್ ಗಡಿ ದಾಟಿದ ಪಂತ್, Wಖಿಅ ಸರಣಿಯ ಅತಿ ಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಎಂಬ ತಮ್ಮ ದಾಖಲೆಯನ್ನು ಮತ್ತಷ್ಟು ಭದ್ರಪಡಿಸಿಕೊಂಡರು.