LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹೊಂಬಾಳೆಯಿಂದ ಹೊಸ ಸಿನಿಮಾ ಘೋಷಣೆ! ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ತನ್ನ ಮುಂದಿನ ಚಿತ್ರವನ್ನು ಘೋಷಿಸಿದೆ.

ವಿಜಯ್ ಕಿರಗಂದೂರು ನಿರ್ಮಿಸಲಿರುವ ಈ ಚಿತ್ರಕ್ಕಾಗಿ ಜನಪ್ರಿಯ ನಟ ಸೂರ್ಯ, ನಟಿ ಕಾಯಾದು ಲೋಹರ್ ಮತ್ತು ಖ್ಯಾತ ನಿರ್ದೇಶಕ ಟಿ. ಜೆ. ಜ್ಞಾನವೇಲ್ ಕೈಜೋಡಿಸಿದ್ದು, ಪ್ರಭಾವಶಾಲಿ ಕಥಾಹಂದರ ಹಾಗೂ ಭವ್ಯ ದೃಶ್ಯವೈಭವದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಭಾರತೀಯ ಚಿತ್ರರಂಗದ ಯಶಸ್ವಿ ನಟರಲ್ಲಿ ಒಬ್ಬರಾದ ಸೂರ್ಯ, ಕಳೆದ ಎರಡು ದಶಕಗಳಿಂದ ತಮ್ಮ ವೈವಿಧ್ಯಮಯ ನಟನೆ ಮತ್ತು ಧೀಮಂತ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಎರಡು ರಾಷ್ಟ್ರ ಪ್ರಶಸ್ತಿಗಳು ಹಾಗೂ ಏಳು ಫಿಲ್ಮ್ಫೇರ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಇವರು, ಕೇವಲ ನಟನೆಯಷ್ಟೇ ಅಲ್ಲದೆ ಉತ್ತಮ ಸಂದೇಶವಿರುವ ಸಿನಿಮಾಗಳನ್ನು ನಿರ್ಮಿಸುವ ಮೂಲಕವೂ ಗುರುತಿಸಿಕೊಂಡಿದ್ದಾರೆ.ಇವರೊಂದಿಗೆ ಕೈಜೋಡಿಸಿರುವ ನಿರ್ದೇಶಕ ಟಿ. ಜೆ. ಜ್ಞಾನವೇಲ್ ಅವರು ತಮ್ಮ `ಜೈ ಭೀಮ್' ಚಿತ್ರದ ಮೂಲಕ ದೇಶಾದ್ಯಂತ ಅಪಾರ ಪ್ರಶಂಸೆ ಗಳಿಸಿದವರು. ಸಾಮಾಜಿಕ ಕಳಕಳಿ, ಭಾವನಾತ್ಮಕ ಆಳ ಮತ್ತು ದಿಟ್ಟ ಕಥಾಹಂದರಕ್ಕೆ ಹೆಸರಾಗಿರುವ ಜ್ಞಾನವೇಲ್, ಇಂದಿನ ಭಾರತೀಯ ಚಿತ್ರರಂಗದ ವಿಶಿಷ್ಟ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ.ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು `ಕೆ.ಜಿ.ಎಫ್', `ಕಾಂತಾರ' ಮತ್ತು `ಸಲಾರ್' ನಂತಹ ಬೃಹತ್ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆದಿದೆ. ಪ್ರಾದೇಶಿಕ ಗಡಿಗಳನ್ನು ಮೀರಿ, ವಿಭಿನ್ನ ಆಲೋಚನೆಗಳ ತಂತ್ರಜ್ಞರಿಗೆ ಮುನ್ನಲೆಗೆ ತರುವ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಕಥೆಗಳನ್ನು ಈ ಸಂಸ್ಥೆ ನಿರಂತರವಾಗಿ ಬೆಂಬಲಿಸುತ್ತಾ ಬಂದಿದೆ.ಚಿತ್ರಕ್ಕೆ ಸಾಯಿ ಅಭ್ಯಂಕರ್ ಅವರ ಸಂಗೀತ ನಿರ್ದೇಶನವಿದ್ದು, ಎಸ್. ಆರ್. ಕದಿರ್ ಅವರ ಛಾಯಾಗ್ರಹಣವಿದೆ. ಚಿತ್ರದ ಕಲಾ ನಿರ್ದೇಶನವನ್ನು ಕೆ. ಕದಿರ್ ನಿರ್ವಹಿಸುತ್ತಿದ್ದು, ಫಿಲೋಮಿನ್ ರಾಜ್ ಅವರ ಸಂಕಲನ ಕಾರ್ಯವಿರಲಿದೆ.ಈ ಹೊಸ ಸಿನಿಮಾದ ಪಯಣವು ಜೂನ್ 29 ರಂದು ಚೆನ್ನೈ ನ ಪಾರ್ಕ್ ಹ್ಯಾಟ್‌ನಲ್ಲಿ ನಡೆದ ಮುಹೂರ್ತ ಸಮಾರಂಭದೊಂದಿಗೆ ಅಧಿಕೃತವಾಗಿ ಆರಂಭವಾಗಿದೆ. ಚಿತ್ರತಂಡ ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಂಡಿದ್ದ ಈ ಸಮಾರಂಭವು, ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಒಕ್ಕೂಟಕ್ಕೆ ಸಾಕ್ಷಿಯಾಯಿತು.ಪ್ರತಿಭಾವಂತ ನಟ, ಭರವಸೆಯ ನಟಿ, ದೀರ್ಘದೃಷ್ಟಿಯುಳ್ಳ ನಿರ್ದೇಶಕ ಹಾಗೂ ಯಶಸ್ವಿ ನಿರ್ಮಾಣ ಸಂಸ್ಥೆ ಒಟ್ಟಾಗಿರುವ ಈ ಚಿತ್ರವು, ಜಗತ್ತಿನಾದ್ಯಂತ ಎಲ್ಲಾ ತಲೆಮಾರಿನ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತಹ ಸೃಷ್ಟಿಯಾಗುವ ಭರವಸೆ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು