LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಚಾರ್ಜ್‍ಶೀಟ್‍ಗೆ ಎನ್‍ಐಎ ಸಿದ್ದತೆ

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಆರೋಪಿ ಶಾರೀಕ್ ಸೇರಿದಂತೆ ನಾಲ್ವರ ವಿರುದ್ಧ ಒಂದು ಸಾವಿರ ಪುಟಗಳ ಆರೋಪಪಟ್ಟಿ(ಚಾರ್ಜ್‍ಶೀಟ್) ಸಲ್ಲಿಸಲು ಮುಂದಾಗಿದ್ದಾರೆ.

ಪ್ರಮುಖ ಆರೋಪಿ ಶಾರಿಕ್, ಮಾಜ್ ಮುನೀರ್, ಯಾಸೀನ್, ಅರಾಫತ್ ಹೇಳಿಕೆಗಳನ್ನು ಎನ್‍ಐಎ ಅಧಿಕಾರಿಗಳು ಚಾರ್ಜ್‍ಶೀಟ್‍ನಲ್ಲಿ ದಾಖಲಿಸಿಕೊಂಡಿದ್ದಾರೆ.ಸ್ಫೋಟಕ್ಕೆ ಎಲ್ಲೆಲ್ಲಿ ಪ್ಲ್ಯಾನ್ ಮಾಡಲಾಗಿತ್ತು, ತರಬೇತಿ ಎಲ್ಲಿ ನಡೆಸಲಾಗಿತ್ತು ಯಾರೆಲ್ಲಾ ಕೃತ್ಯದಲ್ಲಿ ಇದ್ದರು ಎಂಬುದರ ಬಗ್ಗೆ ಉಲ್ಲೇಖಿಸಲಾಗಿದೆ. ಸ್ಥಳ ಮಹಜರು ವೇಳೆ ತರಬೇತಿ ಪಡೆದಿದ್ದ ತುಂಗಾ ನದಿ ತೀರದ ಸ್ಥಳವನ್ನು ಶಾರೀಕ್ ಈಗಾಗಲೇ ತೋರಿಸಿದ್ದಾನೆ.

ಕದ್ರಿ ದೇವಸ್ಥಾನ ಸ್ಫೋಟಕ್ಕೆ ಎಲ್ಲೇಲ್ಲಿ ಯೋಜನೆ ಹಾಕಿಕೊಳ್ಳಲಾಗಿತ್ತು, ತರಬೇತಿ ಎಲ್ಲಿ ನಡೆಸಲಾಗಿತ್ತು, ಯಾರೆಲ್ಲರೂ ತಂಡದಲ್ಲಿದ್ದರು, ಕದ್ರಿ ದೇವಸ್ಥಾನ ಸ್ಫೋಟದ ಬಳಿಕ ಉಡುಪಿ ಕೃಷ್ಣಾಮಠ, ಚಿಕ್ಕಮಗಳೂರು ಬಿಜೆಪಿ ಕಚೇರಿ ಸ್ಫೋಟ ಹೊಣೆಯೂ ಇದೇ ಶಾರಿಕ್ ವಹಿಸಿದ್ದ. ಇದರ ಜೊತೆಗೆ ಕೆಲ ಮಠಗಳನ್ನು ಗುರಿಯಾಗಿಸಿಕೊಂಡಿದ್ದು, ಅವುಗಳ ಸ್ಫೋಟಕ್ಕೂ ಸಂಚು ರೂಪಿಸಿದ್ದ ಬಗ್ಗೆಯೂ ಉಲ್ಲೇಖಿಸಲಾಗಿದೆ.
ಜೊತೆಗೆ, ಆರು ತಿಂಗಳ ಕಾಲ ನಿರಂತರವಾಗಿ ತರಬೇತಿ ಪಡೆದ ಬಗ್ಗೆಯೂ ಮಾಹಿತಿ ಇದರಲ್ಲಿದೆ.

ಅಲ್ಲದೆ, ವಿದೇಶಿ ಹ್ಯಾಂಡ್ಲರ್‍ಗಳ ಬಗ್ಗೆಯೂ ಸ್ಫೋಟಕ ವಿಚಾರಗಳನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಸ್ಪೋಟಕಗಳನ್ನು ಖರೀದಿಗೆ ವಿದೇಶದಿಂದ ಹಣ ಸಾಕಷ್ಟು ಹಣ ಬರುತ್ತಿತ್ತು. ಇದೇ ಹಣದಿಂದ ಆರೋಪಿಗಳು ಸ್ಫೋಟಕಕ್ಕೆ ಬೇಕಾದ ವಸ್ತುಗಳನ್ನು ಖರೀದಿ ಮಾಡುತ್ತಿದ್ದರು. ಜೊತೆಗೆ ಇವರ ಖರ್ಚು ವೆಚ್ಚಗಳನ್ನು ಹ್ಯಾಂಡ್ಲರ್‍ಗಳೇ ನೋಡಿಕೊಳ್ಳುತ್ತಿದ್ದರು ಎಂಬುದು ಉಲ್ಲೇಖವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು