LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಸಲಿ ಸತ್ಯ ಹೇಳಿದ ನಿವೇದಿತಾ ಗೌಡ

ಎಲ್ಲರಿಗೆ ಗೊತ್ತಿರುವಂತೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮನ:ಪೂರ್ವಕವಾಗಿ ಮದುವೆಯಾಗಿ ಮನ:ಪೂರ್ವಕವಾಗಿಯೇ ದೂರವಾದ ಇಬ್ಬರು ಈಗ ತಮ್ಮ ತಮ್ಮ ಬದುಕಿನ ಸಂತೆಯಲ್ಲಿ ನೆಮ್ಮದಿ ಹುಡುಕುತ್ತಿದ್ದಾರೆ. ವಿಚ್ಚೇದನದ ನಂತರ ನಿವೇದಿತಾ ಗೌಡ ರೀಲ್ಸು ಪಾಲ್ಸು ಎಂದು ಮತ್ತೆ ಬ್ಯುಸಿಯಾದರೆ, ಚಂದನ್ ಶೆಟ್ಟಿ ಸಂಗೀತ-ಸಾಹಿತ್ಯ ಎಂದು ತಲೆ ಕೆಡಿಸಿಕೊಂಡಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಅಲ್ಲ ಬದಲಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಬೇಕು, ಬೆಳೆಯಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ.ಇದರ ನಡುವೆ ಸಮಯ ಬಿಡುವು ಮಾಡಿಕೊಂಡು ಆಗಾಗ ಇಬ್ಬರು ಹಲವರಿಗೆ ಸಂದರ್ಶನ ನೀಡುತ್ತಲೇ ಬರುತ್ತಿದ್ದಾರೆ. ಹೀಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ನಿವೇದಿತಾ ಗೌಡ ತಮ್ಮ ಡಿವೋರ್ಸ್ಗೆ ಕಾರಣವೇನು ಎಂದು ಹೇಳಿದ್ದಾರೆ. ಪ್ರೀತಿಸಿ, ಮೋಹಿಸಿ ಮದುವೆಯಾದ ನಂತರ ಎಡವಿದ್ದು ಎಲ್ಲಿ ಎಂದು ವಿವರಿಸಿದ್ದಾರೆ. ಈ ಕುರಿತು ''ರಾಜೇಶ್ ಗೌಡ'' ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ನಿವೇದಿತಾ ಗೌಡ, ಯಾರು ಡಿವೋರ್ಸ್ ಪಡೆಯಬೇಕು ಎನ್ನುವ ಉದ್ದೇಶದಿಂದ ಮದುವೆಯಾಗಲ್ಲ ಎಂದು ಹೇಳಿದ್ದಾರೆ. ಚೆನ್ನಾಗಿರುತ್ತೇವೆ, ಜೊತೆಯಲ್ಲಿ ಜೀವನಪೂರ್ತಿ ಬದುಕುತ್ತೇವೆ, ಎಂಬ ಆಶಯ ಮತ್ತು ಕನಸನ್ನೊತ್ತೇ ಎಲ್ಲರು ಮದುವೆಯಾಗುವುದು ಎಂದು ಹೇಳಿರುವ ನಿವೇದಿತಾ ಗೌಡ ಎಲ್ಲೋ ಒಂದು ಕಡೆ ನಮ್ಮ ನಡುವೆ ಹೊಂದಾಣಿಕೆ ಸಮಸ್ಯೆ ಇತ್ತು ಎಂದು ಹೇಳಿದ್ದಾರೆ. ನಮ್ಮ ಮದುವೆ ವಿಚಾರದಲ್ಲಿ ಸಾಮಾಜಿಕ ಜಾಲತಾಣ ತುಂಬಾನೇ ಮಹತ್ವದ ಪಾತ್ರ ನಿರ್ವಹಿಸಿತ್ತು ಎನ್ನುವುದು ನನ್ನ ಭಾವನೆ ಎಂದು ಹೇಳಿರುವ ನಿವೇದಿತಾ ಗೌಡ, ನೀವು ಮದುವೆಯಾದರೆ ಚೆನ್ನಾಗಿರುತ್ತಿತ್ತು ಎಂದು ಯಾವುದೇ ಕಾರ್ಯಕ್ರಮದಲ್ಲಿ ನಾವು ಭಾಗಿಯಾದಾಗ ಹಲವರು ಹೇಳುತ್ತಿದ್ದರು, ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದರು, ಈ ಹಿನ್ನೆಲೆ ನಮ್ಮಲ್ಲಿ ಆ ಭಾವನೆ ಹುಟ್ಟಲು ಶುರುವಾಯ್ತು ಎಂದು ಹೇಳಿದ್ದಾರೆ.
ಆದರೆ, ನಾವು ಯಾವತ್ತೂ ಜೊತೆಯಾಗಿ ಸಮಯ ಕಳೆದಿರಲಿಲ್ಲ, ಎಲ್ಲೋ ಒಂದು ಕಡೆ ಇದರಿಂದ ಹಿನ್ನೆಡೆಯಾಯ್ತು ಅಂತ ಅನ್ಸುತ್ತೆ ಎಂದು ಹೇಳಿರುವ ನಿವೇದಿತಾ ಗೌಡ ನಾವು ಸ್ನೇಹಿರತಾಗಿದ್ವಿ, ಸುಮ್ಮನೆ ಸ್ನೇಹಿತರಾಗಿಯೇ ಇರಬೇಕಿತ್ತು ಎಂದು ಅನ್ಸಿದ್ದು ಕೂಡ ಇದೆ ಎಂದು ಹೇಳಿದ್ದಾರೆ. ಆಗಲೇ ಹೇಳಿದಂತೆ ಹೊಂದಾಣಿಕೆಯ ಕೊರತೆ ಇತ್ತು ಎಂದು ಹೇಳಿದ್ಧಾರೆ.
ಇನ್ನು ಡಿವೋರ್ಸ್ ನಂತರ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜಂಟಿಯಾಗಿ ಸುದ್ದಿಗೋಷ್ಠಿ ಮಾಡಿದ್ದರು. ಈ ವಿಚಾರದ ಕುರಿತು ಕೂಡ ಮಾತನಾಡಿರುವ ನಿವೇದಿತಾ ಗೌಡ, ವಿಚ್ಚೇದನದ ವಿಚಾರ ತುಂಬಾನೇ ವೈಯಕ್ತಿಕವಾದದ್ದು ಎಂದು ಹೇಳಿದ್ದಾರೆ. ನಮ್ಮ ದಾಂಪತ್ಯ ಮುರಿದು ಬೀಳಲು ಕಾರಣವೇನು ಎನ್ನುವುದಕ್ಕೆ ಉತ್ತರ ನಾನು ಯಾರಿಗೂ ಕೊಡಬೇಕಿರಲಿಲ್ಲ ಎಂದು ಹೇಳಿರುವ ನಿವೇದಿತಾ ಗೌಡ ಆ ಸಮಯದಲ್ಲಿ ತುಂಬಾನೇ ಊಹಾಪೋಹದ ಸುದ್ದಿಗಳು ಕೇಳಿ ಬರಲು ಶುರುವಾದವು ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು