LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ವಪಕ್ಷ ಸಭೆ ಅಗತ್ಯವಿಲ್ಲ

ಸರ್ವಪಕ್ಷ ಸಭೆ ಅಗತ್ಯವಿಲ್ಲ


ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಕರ್ನಾಟಕವು ಮೇಕೆದಾಟು ಅಣೆಕಟ್ಟಿನ ಕಾಮಗಾರಿಯನ್ನು ಮುಂದುವರಿಸದಂತೆ ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ಸರ್ಕಾರ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಬೇಕು ಎಂದು ಸಿಎಂಗೆ ಉದಯನಿಧಿ ಒತ್ತಾಯಿಸಿದರು.ಆರೋಪಗಳಿಗೆ ತಿರುಗೇಟು ನೀಡಿದ ಸಿಎಂ, ಮೇಕೆದಾಟು ಅಣೆಕಟ್ಟಿನ ವಿರುದ್ಧ ವಿಧಾನಸಭೆ ನಿರ್ಣಯ ಅಂಗೀಕರಿಸಿದೆ. ಯೋಜನೆಯನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ತಮಿಳುನಾಡು ರೈತರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ತಿಳಿಸಿದರು. ನಂತರ ಅವರು ಡಿಎಂಕೆ ವಿರುದ್ಧ ತಿರುಗಿ ಬಿದ್ದರು. 1969 ರಲ್ಲಿ ಅವರ ಸರ್ಕಾರವೇ ಕರ್ನಾಟಕ ಯೋಜನೆಗೆ ಮೊದಲು ಅನುಮತಿ ನೀಡಿತು ಎಂದು ಟಾಂಗ್ ಕೊಟ್ಟರು.ಮೇಕೆದಾಟು ವಿಷಯದ ಕುರಿತು ಸರ್ವಪಕ್ಷ ಸಭೆಗೆ ವಿಜಯ್ ಸರ್ಕಾರದ ಪ್ರತಿರೋಧವನ್ನು ಉದಯನಿಧಿ ಸ್ಟಾಲಿನ್ ಪ್ರಶ್ನಿಸಿದರು. ಕರ್ನಾಟಕವು ಸರ್ವಪಕ್ಷ ಸಭೆಯನ್ನು ಕರೆದಿದೆ. ಅವರ ಹಕ್ಕುಗಳಿಗಾಗಿ, ಎಲ್ಲಾ ಪಕ್ಷದವರೂ ಒಂದೇ ತಂಡವಾಗಿ ಒಂದಾಗಿದ್ದಾರೆ. ಮೇಕೆದಾಟು ವಿಷಯದಲ್ಲಿ ತಮಿಳು ಪರವಾಗಿ ಒಗ್ಗಟ್ಟನ್ನು ಪ್ರದರ್ಶಿಸಲು ಸರ್ವಪಕ್ಷ ಸಭೆಯ ಕಲ್ಪನೆಯನ್ನು ಟಿವಿಕೆ ಸರ್ಕಾರ ಏಕೆ ತಿರಸ್ಕರಿಸುತ್ತಿದೆ ಎಂದು ವಿಪಕ್ಷದ ನಾಯಕ ಪ್ರಶ್ನಿಸಿದರು. ಕರ್ನಾಟಕಕ್ಕೆ ಭೇಟಿ ನೀಡುವ ತಮ್ಮ ಪ್ರಸ್ತಾಪವನ್ನು ಸಮರ್ಥಿಸಿಕೊಂಡ ವಿಜಯ್, ನೆರೆಯ ರಾಜ್ಯದೊಂದಿಗೆ ಮಾತನಾಡುವುದರಲ್ಲಿ ಏನು ತಪ್ಪಿದೆ ಎಂದು ಕೇಳಿದರು. ವಿರೋಧಿ ರಾಷ್ಟçಗಳು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿರುವಾಗ, ನಮ್ಮ ನೆರೆಯ ರಾಜ್ಯದೊಂದಿಗೆ ಮಾತುಕತೆ ನಡೆಸುವ ಬಗ್ಗೆ ನಾನು ಯೋಚಿಸಿದೆ. ಅಂತಹ ಪ್ರಯತ್ನದಿಂದ ನಮಗೆ ಅವಮಾನವಾದರೆ ಏನು ಎಂದು ಕೆಲವರು ಕೇಳಿದರು. ಅದು ಸಂಭವಿಸಿದರೂ, ತಮಿಳುನಾಡಿನ ಜನರಿಗಾಗಿ ನಾನು ಅವಮಾನ ಅನುಭವಿಸಲು ಸಿದ್ಧನಿದ್ದೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST