LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಯಾರೂ ನನಗೆ 1 ಕೋಟಿ ರೂಪಾಯಿ ಕೊಟ್ಟಿಲ್ಲ; ಜಮಿಲ್ ಜಮಾಲಿ

ಧುರಂಧರ್ ಮತ್ತು `ಧುರಂಧರ್ ದಿ ರಿವೆಂಜ್' ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.ಆದಿತ್ಯ ಧಾರ್ ನಿರ್ದೇಶನದ `ಧುರಂಧರ್' ಮತ್ತು `ಧುರಂಧರ್: ದಿ ರಿವೆಂಜ್' ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬ ಕಲಾವಿದರು ಇದರಿಂದ ಪ್ರಯೋಜನ ಪಡೆಯುತ್ತಿದ್ದಾರೆ. ರಾಕೇಶ್ ಬೇಡಿ ಈ ಎರಡೂ ಚಿತ್ರಗಳಲ್ಲಿ `ಜಮೀಲ್ ಜಮಾಲಿ' ಪಾತ್ರವನ್ನು ನಿರ್ವಹಿಸಿದ್ದಾರೆ. ಇದು ಅವರ ಜನಪ್ರಿಯತೆ ಹೆಚ್ಚಿಸಿದೆ. ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ಮಾಪಕರು ರಾಕೇಶ್ ಕೆಲಸದಿಂದ ತುಂಬಾ ಪ್ರಭಾವಿತರಾಗಿದ್ದಾರೆ. ತಮ್ಮ ಔದಾರ್ಯವನ್ನು ಪ್ರದರ್ಶಿಸಿ, ಅವರು ರಾಕೇಶ್ ಬೇಡಿ ಅವರಿಗೆ 1 ಕೋಟಿ ರೂಪಾಯಿ ಹೆಚ್ಚು ಹಣ ನೀಡಲಾಗಿದೆ ಎಂದು ವರದಿ ಆಗಿತ್ತು. ಇದಕ್ಕೆ ಉತ್ತರಿಸಿರುವ ಅವರು, `ನನ್ನ ಖಾತೆಗಂತೂ ಬಂದಿಲ್ಲ.ಎಲ್ಲಿ ಬಂದಿದೆ ಹೇಳಿ ಹೋಗಿ ತೆಗೆದುಕೊಂಡು ಬರುತ್ತೇನೆ' ಎಂದು ಉತ್ತರಿಸಿದ್ದಾರೆ. ಅವರ `ಬಚ್ಚಾ ಹೈ ತು ಮೇರಾ' ಎಂಬ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅವರ ಅನೇಕ ಮೀಮ್ಸ್ಗಳು ಸಹ ವೈರಲ್ ಆಗುತ್ತಿವೆ. `ಧುರಂಧರ್: ದಿ ರಿವೆಂಜ್' ಚಿತ್ರದಲ್ಲಿ ಅವರ ಪಾತ್ರಕ್ಕೆ ದೊಡ್ಡ ಟ್ವಿಸ್ಟ್ ಇತ್ತು. ಚಿತ್ರದಲ್ಲಿ ರಣವೀರ್ ಸಿಂಗ್, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್. ಮಾಧವನ್, ಸಾರಾ ಅರ್ಜುನ್ ನಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು