LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಬೆಂಗಳೂರು ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕರಿಬಸವಪ್ಪ ಮತಯಾಚನೆ

ರಾಮನಗರ: ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆಗಳು ಭರ್ತಿಯಾಗದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರು ಒತ್ತಡದಲ್ಲಿದ್ದಾರೆ. ನನಗೆ ಪದವೀಧರರ ಅವಕಾಶ ನೀಡಿದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿಮಾಡಿಸುವ ಕೆಲಸ ಮಾಡುತ್ತೇನೆ ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ಪಿ.ಕರಿಬಸವಪ್ಪ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ನೀಡುತ್ತಿರುವ ನಿರುದ್ಯೋಗ ಭತ್ಯೆಯನ್ನು ಎಲ್ಲಾ ಪದವೀಧರರಿಗೂ ವಿಸ್ತರಿಸಲು ಹೋರಾಟ ನಡೆಸಲಾಗುವುದು. ಶಿಕ್ಷಕರು ಮತ್ತು ಪದವೀಧರರ ಹಕ್ಕುಭಾದ್ಯತೆಗಳಿಗೆ ನಾನು ಸಕ್ರಿಯವಾಗಿ ಹೋರಾಟ ಮಾಡಿ ಪದವೀಧರರ ಹಿತಕಾಯುತ್ತೇನೆ ಎಂದರು.

ನಿವೃತ್ತ ಪ್ರಾಂಶುಪಾಲನಾಗಿ, ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಒಕ್ಕೂಟದ ಅಧ್ಯಕ್ಷನಾಗಿ ನಾನು ಶಿಕ್ಷಣ ಮತ್ತು ಸಂಘಟನೆ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ನನಗೆ ಪದವೀಧರರ ಸಮಸ್ಯೆಯ ಬಗ್ಗೆ ಸಂಪೂರ್ಣ ಅರಿವಿದ್ದು ಸಧನದಲ್ಲಿ ಪದವೀಧರರ ಕುಂದುಕೊರತೆಗಳ ಪರವಾಗಿ ದನಿ ಎತ್ತುತ್ತೇನೆ. ಪದವೀಧರರ ನನಗೆ ಈ ಚುನಾವಣೆಯಲ್ಲಿ ಸಹಕಾರ ನೀಡಬೇಕು ಎಂದು ಮನವಿಮಾಡಿದರು.

2006ರ ಏಪ್ರಿಲ್ 1ರ ಹಿಂದೆ ಸೇವೆಗೆ ಸೇರಿ ನಂತರ ಅನುದಾನಕ್ಕೊಳಪಟ್ಟವರಿಗೆ ಹಿಂದಿನ ಸೇವೆ ಪರಿಗಣಿಸಿ ವೇತನ ನಿಗದಿ ಹಾಗೂ ಹಳೇ ಪಿಂಚಣಿ ಹಾಗೂ 2006ರ ಏಪ್ರಿಲ್1ರ ನಂತರ ಸೇವೆಗೆ ಸೇರಿದವರಿಗೆ ಸರ್ಕಾರಿ - ಅನುದಾನಿತ ನೌಕರಿಗೆ ಹಳೇ ಪಿಂಚಣಿ ಮಂಜೂರಾತಿ ಕೊಡಿಸುವುದು. ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಹಾಗೂ ಸೇವೆ ಭದ್ರತೆ ಒದಗಿಸಲು ಶ್ರಮಿಸುವುದಾಗಿ ತಿಳಿಸಿದರು.

ಈ ಹಿಂದೆ ಇದ್ದಂತ ಪದವಿಪೂರ್ವ ಶಿಕ್ಷಣ ಇಲಾಖೆಯ ಹೆಸರು ಹಾಗೂ ಪರೀಕ್ಷಾ ಮಂಡಳಿಯ ಅಸ್ತಿತ್ವವನ್ನು ಮುಂದುವರೆಸಲು ಪ್ರಯತ್ನಿಸುವುದು. ಸರ್ಕಾರಿ ನೌಕರರಿಗಿರುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ - ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರಿಗೆ ವಿಸ್ತರಿಸಲು ಪ್ರಯತ್ನಿಸುವುದಾಗಿ ಕರಬಸಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಚಂದ್ರೇಗೌಡ, ಬಾನುಮೂರ್ತಿ, ಲಿಂಗಯ್ಯ, ಆದಿನಾರಾಯಣ ರೆಡ್ಡಿ, ಸುಭಾಷ್, ಚನ್ನಬಸಪ್ಪ, ದೇವರಾಜು ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು