ಬೆಂಗಳೂರು: ತಾಯಿ ಭುವನೇಶ್ವರಿ ಪ್ರತಿಮೆ ಮುಂದೆ ಭಾರತೀಯ ಜನತಾ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ರಾಜ್ಯ ಮತ್ತು ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಶೇಕಡ 50ರಷ್ಟು ಇದ್ದಾರೆ. ಮಹಿಳೆಯರಿಗೆ ಸಮಾನ ಅವಕಾಶ ಹಾಗೂ ಸೂಕ್ತ ಪ್ರಾತಿನಿಧ್ಯ ದೊರೆಯಬೇಕು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಮಹಿಳೆಯರಿಗೆ 33ರಷ್ಟು ಮೀಸಲಾತಿ ಕಲ್ಪಿಸುವ