LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಿಲ್ಲದ ಹುಸಿ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ನಗರದಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಮುಸ್ಯಿಯಂಗೆ ನಿನ್ನೆಯಷ್ಟೇ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಆರೋಪಿಗಳು ಜ. 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ ನಗರದ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾರೆ.ಕೂಡಲೇ ಮುಂಬಯಿಯ ಎನ್‍ಎಸ್‍ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ 1 ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು.

ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಸ್ಯಿಯಂಗೆ ಬಾಂಬ್:ನಿನ್ನೆ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು `ಒoಡಿgue999ಟoಟ' ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ವಿಜಯಪುರದ ಮ್ಯೂಜಿಯಂಗೂ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು