ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮಗೀಗ 80 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ತಾವು ಸ್ಪರ್ಧಿಸಲು ಇಚ್ಛೆಯಿಲ್ಲ ಎಂದು ತಿಳಿಸಿದ್ದಾರೆ.
ಈ ಹಿಂದೆಯೇ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದೆ, ಅದರಂತೆ ಇದೀಗ ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ತಮ್ಮ ಪಕ್ಷದ ನಾಯಕಿ ಸೋನಿಯಾಗಾಂಧಿ ಅವರ ಆತ್ಮಕಥೆ ಬಿಡುಗಡೆ ಸಮಾರಂಭಕ್ಕೆ ತಡವಾಗಿ ಹೋದೆ ಹಾಗಾಗಿ ತಾವು ಹಿಂದಿನ ಸಾಲಿನಲ್ಲಿ ಕುಳಿತಿಕೊಂಡೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಪ್ರಮೇಯವಿಲ್ಲ ಎಂದು ತಾವು ಹಿಂದಿನ ಸಾಲಿನಲ್ಲಿ ಕುಳಿತುಕೊಂಡಿರುವ ಬಗ್ಗೆ ಕೇಳಿ ಬರುತ್ತಿವೆ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.