LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಾಯಿ ಕಡಿತ ಪ್ರಕರಣ: ದರ್ಶನ್‍ಗೆ ನೋಟಿಸ್ ಜಾರಿ

ಬೆಂಗಳೂರು: ನಟ ದರ್ಶನ್ ಮನೆಯ ನಾಯಿ ಮಹಿಳೆಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‍ಗೆ ಬೆಂಗಳೂರಿನ ಆರ್ ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್‍ನಲ್ಲಿ ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ನಾಯಿಯ ಕೇರ್ ಟೇಕರ್ ಹೇಮಂತ್ ಅವರ ವಿಚಾರಣೆ ಮಾಡಿರುವ ಪೊಲೀಸರು, ನಂತರ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.ಈ ಹಿಂದೆ ದರ್ಶನ್ ವಿರುದ್ಧ ಆರ್‍ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

ಈ ಬಗ್ಗೆ ಸ್ವತಃ ದೂರುದಾರರಾದ ಅಮಿತಾ ಜಿಂದಾಲ್ ಪ್ರತಿಕ್ರಿಯೆ ನೀಡಿದ್ದರು. ಆರ್‍ಆರ್ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದೆ. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ಕಾರನ್ನು ಪಾರ್ಕ್ ಮಾಡಿದ್ದು, ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು. ದರ್ಶನ್‍ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಕೇಳಿದೆ, ಆಗ ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದರು ಎಂದು ಅಮಿತಾ ಮಾತನಾಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು