LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಡಿ.16, 17 ರಂದು ಪಾರದರ್ಶಕ ಸ್ಪರ್ಧಾತ್ಮಾಕ ಪರೀಕ್ಷೆ ನಡೆಸಲು ಸೂಚನೆ

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 16 ಮತ್ತು 17 ರಂದು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸುಗಮವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಸೂಚಿಸಿದರು.

ಗುರುವಾರ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಿ.16 ರಂದು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 27 ಅಭ್ಯರ್ಥಿಗಳು ಮತ್ತು ಡಿ.17 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 1680 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿμÉೀಧಜ್ಞೆ ಜಾರಿಯಲ್ಲಿರುತ್ತದೆ. ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ಶೀಟ್‍ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಎಂದು ತಿಳಿಸಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ, ಜಿಲ್ಲಾ ಖಜಾನೆ ಅಧಿಕಾರಿ ಪ್ರಭಾವತಿ ಹಾಗೂ ಡಿ.ಎಸ್.ಪಿ ರುದ್ರಪ್ಪ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು