LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಮೈಸೂರಿನಿಂದ ತೆರಳದಿರಿ ಮನೋರಂಜನ್ ಕುಟುಂಬಕ್ಕೆ ಸೂಚನೆ

ಮೈಸೂರು: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಮೈಸೂರಿನಿಂದ ಹೊರಗೆ ತೆರಳಬೇಡಿ ಎಂದು ಪ್ರಕರಣದಲ್ಲಿ ಆರೋಪಿಯಾಗಿರುವ ಮನೋರಂಜನ್ ಕುಟುಂಬಕ್ಕೆ ಗುಪ್ತಚರ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ ಕುಟುಂಬಸ್ಥರಿಗೆ ಈಗ ಸಂಕಷ್ಟ ಎದುರಾಗಿದೆ. ನಿನ್ನೆಯಷ್ಟೇ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು ಅವರನ್ನು ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಸೂಚನೆ ನೀಡಿದ್ದಾರೆ.

ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ ಮೇಲೆ ತೆರಳಿ.ಮನೆಗೆ ಯಾವ ಸಂಬಂಧಿಕರಿಗೂ ಸದ್ಯಕ್ಕೆ ಬಾರದಂತೆ ಸೂಚನೆ ಕೊಡಿ. ಪ್ರತಿ ನಿತ್ಯ ನಿಮಗೆ ಬರುವ ಕರೆಗಳ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ.

ಎಲ್ಲಾ ಕರೆಗಳನ್ನು ತಪ್ಪದೆ ಸ್ವೀಕರಿಸಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಮನೋರಂಜನ್ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.ಮುಂದಿನ ಸೂಚನೆ ನೀಡುವ ವರೆಗೂ ಮನೆಯಲ್ಲಿರುವ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು