LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಲು ಎನ್‍ಎಸ್‍ಎಸ್ ಸಹಕಾರಿ’

ಹೊಸಕೋಟೆ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕ ಸೇವಾ ಮನೋಭಾವ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಗೋಪಾಲ್ ಹೇಳಿದರು.

ಅವರು ತಾಲೂಕಿನ ದೊಡ್ಡಹುಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಹೊಂದುವ ಮೂಲಕ ಮುಂದೆ ಸಮಾಜದಲ್ಲಿ ಉನ್ನತವಾದ ವ್ಯಕ್ತಿತ್ವವನ್ನು ಕಾಪಾಡಿಕೊಂಡಲ್ಲಿ ಮಾತ್ರ ಶಿಕ್ಷಣ ಸಾರ್ಥಕಗೊಳ್ಳಲಿದೆ.

ಶಿಬಿರದ ಅವಧಿಯಲ್ಲಿ ಶ್ರಮದಾನ ಕೈಗೊಂಡ ವಿದ್ಯಾರ್ಥಿಗಳು ಸರಕಾರಿ ಶಾಲೆಯ ಆವರಣದ ಶುಚಿತ್ವ ಮತ್ತು ಕುಡಿಯುವ ನೀರಿನ ಟ್ಯಾಂಕುಗಳ ಸ್ವಚ್ಛತೆ, ಆವರದಲ್ಲಿ 50 ಸಸಿಗಳನ್ನು ನೆಟ್ಟಿರು ವುದು, ಸಮುದಾಯದಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವಂತಹ ಉಪಯುಕ್ತ ಚಟುವಟಿಕೆಗಳನ್ನು ನೆರವೇರಿಸಿರುವುದು ಅಭಿನಂದನಾರ್ಹ.

ಇದರೊಂದಿಗೆ ಗ್ರಾಮದ ಕಲ್ಯಾಣಿಯನ್ನುಸ್ವಚ್ಛಗೊಳಿಸಿ ಹೂಳೆತ್ತುವ ಕಾರ್ಯ, ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ದೇವಾಲಯಗಳಾದ ಆಂಜನೇಯ ಹಾಗೂ ಈಶ್ವರನ ದೇವಾಲಯಗಳ ಮುಂಭಾಗವನ್ನು ಸ್ವಚ್ಛಗೊಳಿಸಿ, ಸುತ್ತಲೂ ಸಸಿ ನೆಡುವ ಮೂಲಕ ಪರಿಸರ ಕಾಳಜಿಯನ್ನು ಪ್ರದರ್ಶಿಸಿದ್ದಾರೆ. ಇವರು ನೆರವೇರಿಸಿರುವ ಕಾರ್ಯವನ್ನು ಗ್ರಾಮಸ್ಥರು ಕಾಪಾಡಿಕೊಂಡಲ್ಲಿ ಮಾತ್ರ ವಿದ್ಯಾರ್ಥಿಗಳ ಶ್ರಮ ಸಾರ್ಥಕವಾಗಲಿದೆ ಎಂದರು.

ಕಾಲೇಜಿನ ಪ್ರಿನ್ಸಿಪಾಲ್ ಡಾ: ಮುನಿ ನಾರಾಯಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕರಾದ ವಿಜಯಲಕ್ಷ್ಮಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಪ್ರಸಾದ್ ಮತ್ತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಅಶ್ವತ್‍ನಾರಾಯಣ, ಡಾ: ಈರಣ್ಣ, ಎನ್‍ಎಸ್‍ಎಸ್ ಕಾರ್ಯಕ್ರಮಧಿಕಾರಿಗಳಾದ ರಾಜೇಶ್ವರಿ ಮತ್ತು ವೀರಭದ್ರ ಸಿ ಹಾಗೂ ಸಹ ಶಿಬಿರಾಧಿಕಾರಿಗಳಾದ ಹರೀಶ ಮತ್ತು ಅನುಶ್ರೀರವರುಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು