LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಎನ್‍ಟಿಆರ್ ನಾಯಕನಾಗಿ ನಟಿಸಿರುವ ದೇವರ ಚಿತ್ರದ ಫಿಯರ್ ಸಾಂಗ್ ರಿಲೀಸ್

ಜೂನಿಯರ್ ಎನ್‍ಟಿಆರ್ ಅಭಿನಯದ 'ದೇವರ' ಚಿತ್ರದ ಕೆಲಸಗಳು ಬಲು ಜೋರಾಗಿ ಸಾಗುತ್ತಿವೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ. ಬಾಲಿವುಡ್ ನಟಿ ಜಾಹ್ನವಿ ಕಪೂರ್ ನಾಯಕಿಯಾಗಿ ನಟಿಸಿದರೆ, ಸೈಫ್ ಅಲಿ ಖಾನ್ ವಿಲನ್ ಆಗಿದ್ದಾರೆ. ವಿಶೇಷ ಏನೆಂದರೆ, ಈ ಚಿತ್ರವು ಎರಡು ಭಾಗಗಳಲ್ಲಿ ತಯಾರಾಗುತ್ತಿದ್ದು, ಮೊದಲ ಪಾರ್ಟ್ ಅಕ್ಟೋಬರ್ 10 ರಂದು ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ.

ಇದೀಗ ಓಖಿಖ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಮೊದಲ ಹಾಡು ಫಿಯರ್ ಸಾಂಗ್ ಬಿಡುಗಡೆ ಆಗಿದೆ. ತೆಲುಗಿನಲ್ಲಿ ಸರಸ್ವತಿ ಪುತ್ರ ರಾಮಜೋಗಯ್ಯ ಶಾಸ್ತ್ರಿ, ತಮಿಳಿನಲ್ಲಿ ವಿಷ್ಣು ಎಡವನ್, ಹಿಂದಿಯಲ್ಲಿ ಮನೋಜ್ ಮುಂತಶಿರ್, ಕನ್ನಡದಲ್ಲಿ ವರದರಾಜ್ ಮತ್ತು ಮಲಯಾಳಂನಲ್ಲಿ ಮಂಕೊಂಬು ಗೋಪಾಲಕೃಷ್ಣನ್ ಈ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ.

ಅನಿರುದ್ಧ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈ ಹಾಡು ಇತರ ಭಾಷೆಗಳಲ್ಲಿಯೂ ಅಷ್ಟೇ ಶಕ್ತಿಶಾಲಿ ಮತ್ತು ಅದ್ಭುತವಾಗಿದೆ. ಲಿರಿಕಲ್ ವೀಡಿಯೋದಲ್ಲಿ ಅನಿರುದ್ಧ್ ರವಿಚಂದರ್ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಹಾಡಿದ್ದರೆ, ಸಂತೋಷ್ ವೆಂಕಿ ಕನ್ನಡ ಮತ್ತು ಮಲಯಾಳಂನಲ್ಲಿ ಧ್ವನಿ ನೀಡಿದ್ದಾರೆ. ಈ ಮೂಲಕ ದೇವರ ಚಿತ್ರದ ಪ್ರಚಾರಕ್ಕೆ ಈ ಹಾಡಿನ ಮೂಲಕ ಆರಂಭ ಸಿಕ್ಕಿದೆ.

ದೇವರ ಚಿತ್ರದಲ್ಲಿ ಶೀರ್ಷಿಕೆ ಪಾತ್ರದಲ್ಲಿ ಎನ್‍ಟಿಆರ್ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎನ್‍ಟಿಆರ್ ಆರ್ಟ್ಸ್ ಮತ್ತು ಯುವಸುಧಾ ಆರ್ಟ್ಸ್‍ನ ಬ್ಯಾನರ್‍ನಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ನಂದಮೂರಿ ಕಲ್ಯಾಣ್ ರಾಮ್ ಈ ಬಹು ನಿರೀಕ್ಷಿತ ಚಿತ್ರವನ್ನು ಪ್ರಸೆಂಟ್ ಮಾಡುತ್ತಿದ್ದಾರೆ. ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ ಈ ಚಿತ್ರದ ನಿರ್ಮಾಪಕರು. ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು