LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ: ನ್ಯಾ.ಭಾರತಿ

ಚಾಮರಾಜನಗರ: ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಮೂಲಕ ಅಧಿಕಾರಿಗಳು ಬಾಲ್ಯವಿವಾಹ ತಡೆಗಟ್ಟಲು ಮುಂದಾಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಜನರಿಗೆ ಬಾಲ್ಯವಿವಾಹದಿಂದ ಆಗಬಹುದಾದ ದುಷ್ಪರಿಣಾಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಹೆಚ್ಚಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲರ ಸಹಕಾರ ಪಡೆದು ಬಾಲ್ಯವಿವಾಹ ತಡೆಗಟ್ಟಬೇಕು ಎಂದರು.

ಸಮಾಜದಲ್ಲಿ ನಡೆಯುವ ದೌರ್ಜನ್ಯಗಳ ಬಗ್ಗೆ ಯಾರು ಕೂಡ ಮೌನ ವಹಿಸಬಾರದು. ಮುಕ್ತವಾಗಿ ಸಂಬಂಧಿಸಿದ ಇಲಾಖೆಗಳಿಗೆ ಜೊತೆ ಮಾತನಾಡಿ ಕಾನೂನಿನ ಸೌಲಭ್ಯ ಪಡೆಯಬಹುದು. ಪೋಷಕರು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಜಾಗೃತರಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಧರ. ಎಂ ಅವರು ಮಾತನಾಡಿ ಜನರಿಗೆ ಕಾನೂನಿನ ಸಾಮಾನ್ಯ ಅರಿವು ಅಗತ್ಯವಾಗಿದೆ. ಕಾನೂನಿನ ಅರಿವು ಮತ್ತು ನೆರವು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಒದಗಿಸುತ್ತದೆ.

ಪರಿಶಿಷ್ಟ ಜಾತಿ, ಪಂಗಡ, ಮಹಿಳೆಯರು, ಮಕ್ಕಳು ಹಾಗೂ 3 ಲಕ್ಷ ರೂ. ಗಿಂತ ಆದಾಯ ಕಡಿಮೆ ಇರುವ ಎಲ್ಲಾ ವರ್ಗದ ಜನರಿಗೆ ಕಾನೂನು ಪ್ರಾಧಿಕಾರವು ನೆರವು ನೀಡುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಕ್ಕಳಿಗೆ ಮದುವೆ ಮಾಡಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳಿಗೆ ಶಿಕ್ಷಣ ಪಡೆಯಲು ಮೊದಲು ಉತ್ತೇಜನ ನೀಡಬೇಕು. ಮಕ್ಕಳ ಭವಿಷ್ಯ ಹಸನಾಗಲು ಚಿಂತಿಸಬೇಕು. ಬಾಲ್ಯ ವಿವಾಹದಿಂದ ಅಪ್ರಾಪ್ತರ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ಕಿರಣ್ ಪಡ್ನೇಕರ್ ಅವರು ಮಾತನಾಡಿ ಅರಿವಿನ ಕೊರತೆಯಿಂದ ಬಾಲ್ಯವಿವಾಹ ಹೆಚ್ಚಾಗುತ್ತಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಪೊಲೀಸ್ ಇಲಾಖೆ ಹೀಗೆ ಎಲ್ಲಾ ಇಲಾಖೆಗಳ ಪಾತ್ರವು ಬಾಲ್ಯವಿವಾಹ ತಡೆಗೆ ಅವಶ್ಯಕವಾಗಿದೆ. ಸಮಾಜದಲ್ಲಿ ನಡೆಯುವ ಮಕ್ಕಳ ಮೇಲಿನ ದೌರ್ಜನ್ಯಗಳು, ಬಾಲ ವಿವಾಹದಂತಹ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದಾಗ ಘಟನೆಗಳು ಸಂಭವಿಸದಂತೆ ತಡೆಯಬಹುದು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನಿನ ಅರಿವು ಅವಶ್ಯಕವಾಗಿದೆ. ಬಾಲ್ಯವಿವಾಹಕ್ಕೆ ಹಲವಾರು ಕಾರಣಗಳಿವೆ, ಅತೀ ಮುಖ್ಯವಾಗಿ ಬಡತನ, ಶಿಕ್ಷಣದ ಕೊರತೆಯಿಂದ ಹೆಚ್ಚು ಬಾಲ್ಯವಿವಾಹಗಳು ನಡೆಯುತ್ತದೆ. 14 ವರ್ಷದ ಎಲ್ಲಾ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಲಕ್ಷ್ಮೀಪ್ರಸನ್ನ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆಗಳು, ಬಾಲ್ಯವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಇದೇ ವೇಳೆ ಗಣ್ಯರು ಬಾಲ್ಯವಿವಾಹ ನಿಷೇಧ ಕಾನೂನಿನ ಕುರಿತ ಪೋಸ್ಟರ್ ಬಿಡುಗಡೆಗೊಳಿಸಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚೆಲುವರಾಜು. ಕೊಳ್ಳೇಗಾಲದ ಪಿ.ಎಂ.ಎಸ್.ಆರ್. ಸಂಸ್ಥೆಯ ನಿರ್ದೇಶಕರಾದ ಆರ್ಡಿಸ್ ಅರ್ನಾಲ್ಡ್, ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್, ಕರ್ನಾಟಕ ಬಾಲ್ಯವಿವಾಹ ವಿರೋಧ ವೇದಿಕೆ ಕೋಆರ್ಡಿನೇಟರ್, ಅಡ್ವೋಕೇಸಿ ವೆಂಕಟೇಶ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು