LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ

ಅರೇಹಳ್ಳಿ: ಇಡೀ ವಿಶ್ವದಲ್ಲಿರುವ ಸಮಾಜ ಸೇವಾ ಸಂಸ್ಥೆಗಳಲ್ಲಿ ಲಯನ್ಸ್ ಸಂಸ್ಥೆ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದ್ದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಲಯನ್ಸ್ ಸಂಸ್ಥೆಯ ಜಿಲ್ಲಾ ರಾಜ್ಯಪಾಲ ಲ. ಡಾ.ಮೆಲ್ವಿನ್ ಡಿಸೋಜಾ ಹೇಳಿದರು.ಬೇಲೂರು ತಾಲೂಕಿನ ಅರೇಹಳ್ಳಿಯ ಲಯನ್ಸ್ ಕ್ಲಬ್ ನಲ್ಲಿ ಆಯೋಜನೆ ಮಾಡಲಾಗಿದ್ದ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಪ್ರಪಂಚದಲ್ಲಿ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದೆ.

ಇಂತಹ ಸಮಸ್ಯೆಗಳಿಗೆ ತಿಲಾಂಜಲಿ ಇಡಲು ನಮ್ಮ ಸಂಸ್ಥೆಯು ಹಗಲಿರುಳು ಶ್ರಮಿಸುತ್ತಿದೆ. ನಮ್ಮ ಸಂಸ್ಥೆ ಇತ್ತೀಚಿನ ದಿನಗಳಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವುದರೊಂದಿಗೆ ಖ್ಯಾತಿ ಗಳಿಸಿದೆ. ನಾನು ವೃತ್ತಿಯಲ್ಲಿ ಶಿಕ್ಷಕನಾದರೂ ಸಹ ಈ ಸಂಸ್ಥೆಯಲ್ಲಿರುವ ಧ್ಯೇಯೋದ್ದೇಶಗಳು ನನ್ನನ್ನು ಆಕರ್ಷಿಸಿತು.

ಆದ್ದರಿಂದ ಮನುಷ್ಯ ಕೂಡಿಟ್ಟಿರುವ ಸಂಪತ್ತಿನ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಮೀಸಲಿಡಬೇಕು. ಅನೇಕ ಸಮಸ್ಯೆಗಳನ್ನು ಇಂದು ಭಾರತ ಎದುರಿಸುತ್ತಿದೆ.ಆ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ನಾವೆಲ್ಲರೂ ಒಟ್ಟಾಗಿ ಕಾರ?ಯನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಆಗ ಮಾತ್ರ ನಿರುದ್ಯೋಗ, ಬಡತನ, ಅನಕ್ಷರತೆಯಂತಹ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಧ್ಯ ಎಂದರು.

ಲಯನ್ಸ್ ಅಧ್ಯಕ್ಷ ಲ. ಲಕ್ಷ್ಮಣ್ ಪೂಜಾರಿ ಮಾತನಾಡಿ, ನಮ್ಮ ಸಂಸ್ಥೆ ಸರ್ವ ಸದಸ್ಯರ ಬೆಂಬಲದೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಉಳಿದಿರುವ ನನ್ನ ಅವಧಿಯಲ್ಲಿ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಲ.ಲಕ್ಷ್ಮಣ್ ಪೂಜಾರಿ ಹಾಗೂ ಲ.ಸಂಕಲ್ಪರವರು ಸಂಸ್ಥೆಯ ಸಹಯೋಗದೊಂದಿಗೆ ಅನುಘಟ್ಟ ಸರಕಾರಿ ಪ್ರೌಢಶಾಲೆಗೆ ನೀರಿನ ಶುದ್ಧಿಕರಣ ಘಟಕ, ಸಂಸ್ಥೆಗೆ ಧ್ವನಿವರ್ಧಕ ಕೊಡುಗೆ ಸಕಲೇಶಪುರ ಹಾಗೂ ಬೇಲೂರು ರಸ್ತೆಯಲ್ಲಿರುವ ಸ್ವಾಗತ ಫಲಕಗಳನ್ನು ರಾಜ್ಯಪಾಲರು ಅನಾವರಣಗೊಳಿಸಿದರು.

ಮಲಸಾವರ ಅಂಚೆ ಇಲಾಖೆಯ ಸಿಬ್ಬಂದಿ ಮುತ್ತಣ್ಣ, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಲ.ಫೆಲಿಕ್ಸ್ರವರ ಪುತ್ರ ನಿಶಾಂತ್‍ರವರನ್ನು ಈ ವೇಳೆ ಸನ್ಮಾನಿಸಲಾಯಿತು.ಪ್ರಾಂತೀಯ ಅಧ್ಯಕ್ಷ ಲ.ಜಗದೀಶ್, ವಲಯಾಧ್ಯಕ್ಷ ಲ.ಸಂತೋಷ್, ಕಾರ್ಯದರ್ಶಿ ಲ.ಸಂಕಲ್ಪ, ಖಜಾಂಚಿ ಲ.ಸತೀಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಲ.ಚಾಮರಾಜ್ ಸೇರಿದಂತೆ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು