LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

`ಅಧಿಕಾರಿಗಳು ಸಿಬ್ಬಂದಿಗಳು ಡೆಂಗ್ಯೂ ಸೇರಿದಂತೆ ಸಾಂಕ್ರಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು’

ಬೇಲೂರು: ಬೇಲೂರು ತಾಲ್ಲೂಕಿನಲ್ಲಿ ದಿನಕಳೆದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜಕ್ಕೂ ಶೋಚನೀಯವಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಸಿಬ್ಬಂದಿಗಳು ಡೆಂಗ್ಯೂ ಸೇರಿದಂತೆ ಸಾಂಕ್ರಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಅಲ್ಲದೆ ಮುನ್ನಚ್ಚರಿಕೆ ವಹಿಸಬೇಕಿದೆ.

ಅಸಡ್ಡೆ ತೋರಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಯಾವುದೇ ಮೂಲಾಜು ಇಲ್ಲದೆ ಕ್ರಮಕೈಗೊಳ್ಳಲು ತಾಲ್ಲೂಕು ಆಡಳಿತ ಮೀನಾ-ಮೇಷ ಎಣಿಸುವುದಿಲ್ಲ ಎಂದು ಬೇಲೂರು ತಹಸೀಲ್ದಾರ್ ಎಂ.ಮಮತ ಎಚ್ಚರಿಕೆ ನೀಡಿದರು.ಪಟ್ಟಣದ ಹೃದಯಭಾಗದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಸೇರಿದಂತೆ ಸಾಂಕ್ರಮಿಕ ರೋಗಗಳ ನಿಯಂತ್ರಣ ಕುರಿತು ನಡೆಸ ಸಭೆಯಲ್ಲಿ ಮಾತನಾಡಿದ ಅವರು ಬೇಲೂರು ತಾಲ್ಲೂಕಿನಲ್ಲಿ ಸದ್ಯ 40 ಪ್ರಕರಣ ಬಂದಿದೆ. ಅಲ್ಲದೆ 10 ಪ್ರಕರಣಗಳು ಡೆಂಗ್ಯೂ ತೀವ್ರತೆ ಬಗ್ಗೆ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಸಾಂಕ್ರಮಿಕ ರೋಗಳ ನಿಯಂತ್ರಣದಲ್ಲಿ ಪುರಸಭೆ ಮತ್ತು ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾಗಿದೆ. ಸದ್ಯ ಬೇಲೂರು ಪುರಸಭೆಯಲ್ಲಿ ಡೆಂಗ್ಯೂ ಜ್ವರದಿಂದ ಯುವಕ ಬಲಿಯಾಗಿದ್ದು, ಪುರಸಭೆ ಅಸ್ವಚ್ಛತೆ ತಾಣದ ಸ್ವಚ್ಛತೆಗೆ ಮುಂದಾಗಬೇಕಿದೆ. ಅಲ್ಲದೆ ಎಲ್ಲೆಂದರಲ್ಲಿ ತೆಂಗಿನ ಚಿಪ್ಪು, ಡ್ರಮ್‍ಗಳ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಿ ಎಂದು ಸಲಹೆ ನೀಡಿದ ಅವರು ಹಾಸ್ಟಲ್ ವಿದ್ಯಾರ್ಥಿಗಳಿಗೆ ಜ್ವರ ಕಾಣಿಸಿಕೊಂಡರೆ ತಕ್ಷಣವೇ ಆಸ್ಪತ್ರೆ ಕರೆದುಕೊಂಡು ಬರಬೇಕಿದೆ. ಒಂದು ವೇಳೆ ಅನಾಹುತ ನಡೆದರೆ ಅಲ್ಲಿನ ವಾರ್ಡ್ನ್ ಮತ್ತು ಅಧಿಕಾರಿಗಳು ಕಾರಣವಾಗುತ್ತಾರೆ.

ಯಾವುದೇ ಜ್ವರ ಇರಲಿ ಮೊದಲು ರಕ್ತ ಪರೀಕ್ಷೆ ನಡೆಸಬೇಕಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸೊಳ್ಳೆಯ ಪರದೆಗಳನ್ನು ಉಪಯೋಗಿಸಬೇಕು. ತಾಲ್ಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಜಾಗೃತಿಯಿಂದ ಕೆಲಸ ಮಾಡುವ ಮೂಲಕ ತಾಲ್ಲೂಕಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಮಾತನಾಡಿ, ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಕರೆದು ಡೆಂಗ್ಯೂ ನಿಯಂತ್ರಣದ ಬಗ್ಗೆ ಮುಚ್ಚರಿಕೆ ಕ್ರಮದ ಬಗ್ಗೆ ಸವಿಸ್ತಾರ ಮಾಹಿತಿ ನೀಡಲಾಗಿದೆ. ಅದರೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಡ್ರಮ್‍ಗಳ ಸ್ವಚ್ಛತೆಗೆ ಮುಂದಾಗಿಲ್ಲ, ಆಸ್ಪತ್ರೆಯಲ್ಲಿ ಎಲ್ಲಾ ರೋಗಿಗಳಿಗೆ ಉತ್ತಮ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯಾನಿರ್ವಾಹಕ ಅಧಿಕಾರಿ ಸತೀಶ್, ಪುರಸಭೆ ಮುಖ್ಯಾಧಿಕಾರಿ ಇಂದು, ಕ್ಷೇತ್ರ ಸಮನ್ವಯ ಅಧಿಕಾರಿ ಶಿವಮರಿಯಪ್ಪ, ರಂಗಸ್ವಾಮಿ, ರಮೇಶ್, ಉಮೇಶ್, ಉಷಾ, ದಯಾನಂದ್ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು