LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಡಿ.25 ರಂದು ನೂತನ ವರ್ಷದ ದಿನಚರಿ ಬಿಡುಗಡೆ ಕಾರ್ಯಕ್ರಮ

ದೊಡ್ಡಬಳ್ಳಾಪುರ: ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ನೇ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ. ಹರೀಶ್ ಗೌಡ ಅವರು ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ನಗರದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.

ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಲಾಗುತ್ತಿದೆ ಎಂದು ಹೇಳಿದರು.ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದ್ದು ವಿಧಾನ ಸಭಾ ಚುನಾವಣಾ ಸಂದರ್ಭಗಳಲ್ಲಿ ಕೆಲ ಸಮಸ್ಯೆಗಳಿಂದ ಹಿನ್ನಡೆಯಾಗುತ್ತಿದೆ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಗೊಂದಲ ಹಾಗೂ ಸಮಸ್ಯೆಗಳು ಎದುರಾಗದಂತೆ ಕಾರ್ಯ ನಿರ್ವಹಿಸಲು ನಮ್ಮ ಪಕ್ಷದ ಮುಖಂಡರು ಸಿದ್ದರಾಗಿದ್ದೇವೆ ಎಂದರು.

ಕಾರ್ಯಕರ್ತರಲ್ಲಿ ಹೊಸ ಹುರುಪು ಹಾಗೂ ಚೈತನ್ಯ ತುಂಬುವ ಸಲುವಾಗಿ ಹಾಗೂ ತಾಲ್ಲೂಕಿನಲ್ಲಿನ ನಿಷ್ಠಾವಂತ ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕೆ ಪೂರಕವಾಗಿ ಸಿದ್ದರಾಗಿರುವುದಾಗಿ ಸಂದೇಶವನ್ನ ಈ ಕಾರ್ಯ ಕ್ರಮದ ಮೂಲಕ ನೀಡಲು ಹಾಗೂ ತಾಲ್ಲೂಕಿನಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಸೋತರು ಸಹ ಕಾರ್ಯಕರ್ತರ ಬೆಂಬಲಕ್ಕೆ ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ಜೆಡಿಎಸ್ ಮುಖಂಡರಾದ ತ.ನಾ ಪ್ರಭುದೇವ್, ಎ.ನರಸಿಂಹಯ್ಯ, ಆನಂದ್, ಪ್ರವೀಣ್ ಶಾಂತಿನಗರ, ತಳವಾರ್ ನಾಗಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು