ಗುರುನಂದನ್ ನಾಯಕನಾಗಿ ತಪಸ್ವಿನಿ ಪೂಣಚ್ಛ ನಾಯಕಿಯಾಗಿ ನಟಿಸಿರುವ, ಸುಮಂತ್ ಗೌಡ ನಿರ್ದೇಶನದ ಗುರುನಂದನ್ ಹಾಗೂ ಸ್ನೇಹಿತರ ನಿರ್ಮಾಣದ “ಒಖ ಜಾಕ್” ಚಿತ್ರ ಡಿಸೆಂಬರ್ 4 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಯ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡಿರುವ “ಒಖ ಜಾಕ್’ ತಂಡ ದಸರಾ ಶುಭಾಶಯ ತಿಳಿಸಿದೆ.ಈಗಾಗಲೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗಿದೆ. ಹಾಸ್ಯವೇ ಪ್ರಧಾನವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ ಮುಂತಾದವರಿದ್ದಾರೆ. ಶಿವಸೇನ ಛಾಯಾಗ್ರಾಹಕರಾಗಿ ಹಾಗೂ ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜಿಸಿದ್ದಾರೆ.