LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News | Districts Bangalore Urban

ಸಿನಿಮಾ ಟಿಕೆಟ್‌ಗಳ ಮೇಲೆ 

ಶೇ.2ರಷ್ಟು ಸೆಸ್



ಬೆಂಗಳೂರು: ರಾಜ್ಯದಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿಮಾ ಟಿಕೆಟ್‌ಗಳ ಮೇಲೆ ಶೇಕಡಾ 2 ರಷ್ಟು ಹೆಚ್ಚುವರಿ ಸೆಸ್ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 
ಈ ನಿಯಮವನ್ನು ಸೆಪ್ಟೆಂಬರ್ 30 ರಿಂದ ರಾಜ್ಯಾದ್ಯಂತ ಅಧಿಕೃತವಾಗಿ ಜಾರಿಗೆ ತರಲು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದ್ದು, ಚಲನಚಿತ್ರ ಪ್ರೇಕ್ಷಕರಿಗೆ ಟಿಕೆಟ್ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸಿನಿಮಾ ಮತ್ತು ಸಾಂಸ್ಕೃ ತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಅಧಿನಿಯಮ-2024 ರ ಅಡಿಯಲ್ಲಿ ಈ ಹೊಸ ಸೆಸ್ ಸಂಗ್ರಹಣೆಗೆ ಆದೇಶಿಸಲಾಗಿದೆ. 2024 ರಲ್ಲಿ ರಾಜ್ಯ ಸರ್ಕಾರವು ಈ ಮಹತ್ವದ ವಿಧೇಯಕವನ್ನು ಮಂಡಿಸಿತ್ತು. ಸೆಪ್ಟೆಂಬರ್ 23, 2024 ರಂದು ರಾಜ್ಯಪಾಲರು ಈ ವಿಧೇಯಕಕ್ಕೆ ಅಂಕಿತ ಹಾಕಿದ್ದ ಪ್ರಕ್ರಿಯೆ ಪೂರ್ಣಗೊಂಡು, ಮರುದಿನವೇ ಸರ್ಕಾರದ ವಿಶೇಷ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿತ್ತು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST