ಬೆಂಗಳೂರು: ರಾಜ್ಯದ ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಫುಡ್ ಸೇಫ್ಟಿ ಇಲಾಖೆ ಪರಿಶೀಲನೆಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಈ ಹಿನ್ನೆಲೆ ಬೆಂಗಳೂರಿನ ಪ್ರಸಿದ್ಧ ಖಾಸಗಿ ಹೋಟೆಲ್ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿ ಅವಧಿ ಮೀರಿದ 31 ಲೀಟರ್ ಹಾಲು ಪತ್ತೆಯಾಗಿದೆ. ಅವಧಿ ಮೀರಿದ ಹಾಲನ್ನು ಹೋಟೆಲ್‌ನಲ್ಲಿ ಬಳಕೆ ಮಾಡಲಾಗುತ್ತಿತ್ತು ಎಂಬುದು ಅಧಿಕಾರಿಗಳ ಪರಿಶೀಲನೆಯಲ್ಲಿ ಪತ್ತೆಯಾಗಿದೆ.