LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಪರೇಷನ್ ಲಂಡನ್ ಕೆಫೆ?!

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಬಹು ನಿರೀಕ್ಷೆಯ ಕನ್ನಡ ಮರಾಠಿ ಹಿಂದಿ ತಮಿಳು ತೆಲುಗು ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ಆಪರೇಷನ್ ಲಂಡನ್ ಕೆಫೆ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇಂದು ಜೂನ್ ಐದನೇ ತಾರೀಕು ನಾಯಕ ನಟ ಕವೀಶ್ ಶೆಟ್ಟಿಯ ಹುಟ್ಟುಹಬ್ಬದ ಸಂಭ್ರಮಕ್ಕೆ ಇಡೀ ಚಿತ್ರತಂಡದ ಪರವಾಗಿ ವಿಶೇಷವಾಗಿ ಶುಭ ಹಾರೈಸುತ್ತಾ ಸಕಾಲದಲ್ಲಿ ಎಲ್ಲ ಕೆಲಸವನ್ನು ಮುಗಿಸಿ ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.

ಕವೀಶ್ ಮತ್ತು ಮೇಘಾ ಶೆಟ್ಟಿ ಜೊತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜೊತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜೊತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು