LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

"ದೀಪಾವಳಿ ಪ್ರಯುಕ್ತ ಹೆಚ್ಚುವರಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ"

ಹುಬ್ಬಳ್ಳಿ: ೨೦೨೫ ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು ೩೧೦ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ದಿ: ೨೦-೧೦-೨೦೨೫ ಮತ್ತು ದಿ: ೨೨-೧೦-೨೦೨೫ ರಂದು ಕ್ರಮವಾಗಿ ನರಕ ಚತುರ್ಧಶಿ ಹಾಗೂ ದೀಪಾವಳಿ ಅಂಗವಾಗಿ ಸರ್ಕಾರಿ ರಜೆ ಹಾಗೂ ದಿ: ೧೮-೧೦-೨೦೨೫ ಹಾಗೂ ೧೯-೧೦-೨೦೨೫ ರಂದು ವಾರಾಂತ್ಯ ದಿನಗಳಾಗಿದ್ದರಿAದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರಿನಿAದ ರಾಜ್ಯ/ಅಂತರರಾಜ್ಯ ವಿವಿದ ಸ್ಥಳಗಳಿಗೆ ತೆರಳಲು ದಿನಾಂಕ: ೧೭- ೧೦-೨೦೨೫ ರಿಂದ ೧೯-೧೦-೨೦೨೫ ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ನಂತರ ದಿನಾAಕ: ೨೨-೧೦-೨೦೨೫ ಮತ್ತು ನಂತರ ದಿನಗಳAದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು