LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ರೋಜಿ" ಚಿತ್ರದಲ್ಲಿ ಒರಟ ಪ್ರಶಾಂತ್

ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ "ರೋಜಿ". ಈ ಚಿತ್ರದಲ್ಲಿ ಈಗಾಗಲೇ ಶ್ರೀನಗರ ಕಿಟ್ಟಿ ಹಾಗೂ "ಲಿಯೋ" ಚಿತ್ರದ ಸ್ಯಾಂಡಿ ಕುಮಾರ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟ ಒರಟ ಪ್ರಶಾಂತ್ "ರೋಜಿ" ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಸ್ವಾಮಿ ಅಣ್ಣ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ.

ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ. "ರೋಜಿ" ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು."ರೋಜಿ" ಚಿತ್ರ ಸ್ಟೈಲೀಶ್ ಗ್ಯಾಂಗ್ ಸ್ಟರ್ ಡ್ರಾಮ ಎಂದು ಮಾತನಾಡಿದ ನಿರ್ದೇಶಕ ಶೂನ್ಯ, ಒರಟ ಪ್ರಶಾಂತ್ ಬಹಳ ದಿನಗಳ ನಂತರ ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ.

"ಸ್ವಾಮಿ ಅಣ್ಣ" ಎನ್ನುವುದು ಅವರ ಪಾತ್ರದ ಹೆಸರು. ಚಿತ್ರದಲ್ಲಿ ಇನ್ನೂ ಎರಡು ಪ್ರಮುಖ ಪಾತ್ರಗಳಿದ್ದು, ಸದ್ಯದಲ್ಲೇ ಮಾಹಿತಿ ನೀಡುತ್ತೇನೆ ಎಂದರು.ನನಗೆ ಬಹಳ ಅವಕಾಶಗಳು ಬಂದವು. ಆದರೆ, ನಾನು ಒಪ್ಪಿರಲಿಲ್ಲ. ಶೂನ್ಯ ಅವರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಹಾಗಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಯೋಗಿ ಅವರ ಜೊತೆಗೆ ಅಭಿನಯಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರತ್ತಿದೆ ಎಂದು ಒರಟ ಪ್ರಶಾಂತ್ ತಿಳಿಸಿದರು.

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿರುತ್ತದೆ. ನಾನು ಇತ್ತೀಚಿಗೆ ಹೊಸಚಿತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಕೊರೋನ ನಂತರ ನಾನು ಒಪ್ಪಿಕೊಂಡಿರುವ ಚಿತ್ರ "ರೋಜಿ" ಎಂದು ತಿಳಿಸಿದ ಸಂಗೀತ ನಿರ್ದೇಶಕ ಗುರುಕಿರಣ್, ನಾನು ಚಿತ್ರರಂಗಕ್ಕೆ ಬಂದು ಇಪ್ಪತ್ತೈದು ವರ್ಷಗಳಾಯಿತು.

ಈ ಸಮಯದಲ್ಲಿ ನನ್ನ "ಕರಿಮಣಿ ಮಾಲೀಕ" ಹಾಡು ಈಗ ಸಾಕಷ್ಟು ಟ್ರೆಂಡ್ ಆಗುತ್ತಿರುವುದಕ್ಕೆ ಸಂತಸಪಟ್ಟರು. ನಿರ್ಮಾಪಕರಾದ ಡಿ.ವೈ.ರಾಜೇಶ್, ಡಿ.ವೈ.ವಿನೋದ್, ಛಾಯಾಗ್ರಾಹಕ ಎಸ್ ಕೆ ರಾವ್ ಹಾಗೂ ಸಂಕಲನಕಾರ ಹರೀಶ್ ಕೊಮ್ಮೆ "ರೋಜಿ" ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು