LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

`ಪರಿಶಿಷ್ಟರ ಹಿತರಕ್ಷಣಾ ಸಮಿತಿ ಸಭೆಗಳನ್ನು ನಿಗದಿತ ಕಾಲಾವಧಿಯಲ್ಲಿ ಆಯೋಜಿಸಿ’

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯನ್ನು ನಿಗದಿತ ಕಾಲಾವಧಿಯಲ್ಲಿ ಆಯೋಜಿಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವಂತೆ ರ‍್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಎಲ್. ಮರ‍್ತಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಜು.4) ದಂದು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆಯೋಜಿಸಿ ಪರಿಶಿಷ್ಟ ಸಮುದಾಯದವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ರ‍್ಕಾರದ ನರ‍್ದೇಶನವಿದೆ. ಅದರನ್ವಯ ಜಿಲ್ಲಾ ಹಾಗೂ ತಾಲೂಕು ಆಡಳಿತಗಳು ಪರಿಶಿಷ್ಟರ ಸಮಸ್ಯೆಗಳನ್ನು ನಿಯಮಾನುಸಾರ ಪರಿಹರಿಸಲು ಮುಂದಾಗಬೇಕು. ಜಿಲ್ಲೆಯಲ್ಲಿ ಈ ಬಗ್ಗೆ ಸಾಕಷ್ಟು ದೂರುಗಳು ಸರ‍್ವಜನಿಕರಿಂದ ಆಲಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಯಾವುದೇ ದೂರುಗಳನ್ನು ಆಯೋಗವು ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.ಉಪವಿಭಾಗಾಧಿಕಾರಿ ಕರ‍್ಟ್ನಲ್ಲಿ ಪರಿಶಿಷ್ಟ ಜನಾಂದವರ ಸಾಕಷ್ಟು ಪ್ರಕರಣಗಳು ಬಾಕಿ ಉಳಿದಿವೆ. ಈ ಸಂಬಂಧ ಅವಶ್ಯಕ ದಾಖಲೆಗಳನ್ನು ಪಡೆದು ಅದಷ್ಟು ಬೇಗನೆ ಪ್ರಕರಣಗಳನ್ನು ಬಗೆಹರಿಸಲು ಕರ‍್ಯಪ್ರವೃತ್ತರಾಗಬೇಕು. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ರ‍್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ವಿದ್ಯರ‍್ಥಿನಿಲಯಗಳು ಇನ್ನೂ ಗಂಭೀರ ಸ್ಥಿತಿಯಲ್ಲಿವೆ. ಹಾಸ್ಟಲ್‌ಗಳಲ್ಲಿ ಮಕ್ಕಳ ಸಮಸ್ಯೆಗಳನ್ನು ಶೀಘ್ರವಾಗಿ ಸರಿಪಡಿಸಬೇಕು. ಉತ್ತಮ ಪುಸ್ತಕಗಳನ್ನು ಖರೀದಿಸಿ ಮಕ್ಕಳನ್ನು ಸಿ.ಇ.ಟಿ, ನೀಟ್, ಜೆ.ಇ.ಇ ಸ್ರ‍್ಧಾತ್ಮಕ ಪರೀಕ್ಷೆಗೆ ಉತ್ತೇಜಿಸಿ ಸಜ್ಜುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚತಾ ಕರ‍್ಯನರ‍್ವಹಿಸುತ್ತಿರುವ ಸಫಾಯಿ ರ‍್ಮಚಾರಿಗಳಿಗೆ ಅವಶ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯ ಸುರಕ್ಷಾ ಪರಿಕರಗಳನ್ನು ವಿತರಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ವೈದ್ಯಕೀಯ ವೆಚ್ಚ ಮರುಪಾವತಿಗೆ ಕ್ರಮ ವಹಿಸಬೇಕು. ಪರಿಶಿಷ್ಟ ಸಮುದಾಯದ ಗುತ್ತಿಗೆದಾರರಿಗೆ ಮೀಸಲಾತಿ ನಿಗದಿಪಡಿಸಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ನೀಡಬೇಕು. ಶೇ. 24.10ರ ಅನುದಾನ ಸರ‍್ಪಕ ಬಳಕೆಯಾಗಬೇಕು. ಈ ಬಗ್ಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಮಾಹಿತಿ ಫಲಕ ಅಳವಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಶಾಲಾ ಶಿಕ್ಷಣ ಇಲಾಖೆಯು ಶಾಲೆಗೆ ಮಕ್ಕಳು ದಾಖಲಾದ ತಕ್ಷಣವೇ ವಿದ್ಯರ‍್ಥಿವೇತನ ನೀಡಿ ಅನುಕೂಲ ಕಲ್ಪಿಸಬೆಕು. ವಿಳಂಬ ಧೋರಣೆ ಅನುಸರಿಸದೇ ಸಕಾಲದಲ್ಲಿ ವಿದ್ಯರ‍್ಥಿವೇತನ ಪಾವತಿಗೆ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾಸಂಸ್ಥೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳಿಗೆ ಸೂಕ್ತ ಅಭ್ರ‍್ಥಿಗಳನ್ನೇ ಪರಿಗಣಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ನೂತನ ಕಲಿಕಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಮಕ್ಕಳನ್ನು ಈಗಿನಿಂದಲೇ ಸ್ರ‍್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಬೇಕು ಎಂದರು.ಕೃಷಿ ಇಲಾಖೆಯಲ್ಲಿ ಫಲಾನುಭವಿಗಳ ಅಯ್ಕೆಯಲ್ಲಿ ಪಾರರ‍್ಶಕತೆ ಕಾಪಾಡಬೇಕು. ಸಮುದಾಯಕ್ಕೆ ಮೀಸಲಾಗಿರುವ ಸೌಲಭ್ಯಗಳನ್ನು ಸರ‍್ಪಕವಾಗಿ ಅನುಷ್ಠಾನ ಮಾಡಬೇಕು. ಅರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಸಮನ್ವಯದಿಂದ ಆರೋಗ್ಯ ಕರ‍್ಯಕ್ರಮಗಳನ್ನು ರ‍್ಪಡಿಸಿ ತಾಯಿ ಮತ್ತು ಮಗುವಿನ ರಕ್ತಹೀನತೆ ತಡೆಗಟ್ಟಬೇಕು. ಕನ್ನಡ, ಸಂಸ್ಕೃತಿ ಇಲಾಖೆ ಸಮುದಾಯದ ಕಲಾವಿದರನ್ನು ನಿರಂತರವಾಗಿ ಪ್ರೋತ್ಸಾಹಿಸಬೇಕು. ಕ್ರೀಡಾ ಇಲಾಖೆಯು ಉತ್ತಮ ಕ್ರೀಡಾಪಟುಗಳನ್ನು ರೂಪಿಸಬೇಕು. ಕರ‍್ಮಿಕ ಇಲಾಖೆಯು ಸಮುದಾಯದ ಬಾಲಕರ‍್ಮಿಕರನ್ನು ರಕ್ಷಿಸಿ ಪುರ‍್ವಸತಿ ಕಲ್ಪಿಸಲು ಮುಂದಾಗುವಂತೆ ಆಯೋಗದ ಅಧ್ಯಕ್ಷರಾದ ಡಾ. ಎಲ್. ಮರ‍್ತಿ ಅವರು ಅಧಿಕಾರಿಗಳಿಗೆ ನರ‍್ದೇಶಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಜಿಲ್ಲೆಯಾದ್ಯಂತ ಬಾಲಕರ‍್ಮಿಕರನ್ನು ವ್ಯಾಪಕವಾಗಿ ಗುರುತಿಸಿ ಬಾಲಕರ‍್ಮಿಕ ಪದ್ದತಿ ದುಷ್ಪರಿಣಾಮಗಳ ಅರಿವು ಮೂಡಿಸಲಾಗುತ್ತಿದೆ. ಬಾಲಕರ‍್ಮಿಕ ಮುಕ್ತ ಮಕ್ಕಳನ್ನು ಶಾಲೆಗೆ ಸೇರಿಸಿ ಅಗತ್ಯ ಸೌಲಭ್ಯ ಒದಗಿಸಲಗುತ್ತಿದೆ. ಶಾಲೆಗೆ ಹೋಗಲು ಅಸಕ್ತಿ ಇರದಿದ್ದ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಜೀವನ ಭದ್ರತೆ ನೀಡಲಾಗುತ್ತಿದೆ ಎಂದರು. ಮುಂದುವರಿದು ಆಯೋಗದ ಅಧ್ಯಕ್ಷರಾದ ಡಾ. ಎಲ್. ಮರ‍್ತಿ ಅವರು ತೋಟಗಾರಿಕೆ, ರೇಷ್ಮೆ, ಅರಣ್ಯ, ಕೈಗಾರಿಕೆ, ಆಹಾರ, ಸಣ್ಣ ನೀರಾವರಿ, ಸಹಕಾರ, ಮೀನುಗಾರಿಕೆ, ಕೈಮಗ್ಗ ಮತ್ತು ಜವಳಿ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಪ್ರಗತಿ ಪರಿಶೀಲಿಸಿದರು. ಅಗತ್ಯ ಸಲಹೆ ಸೂಚನೆ ನೀಡಿದರು. ರ‍್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ ಎಂ. ಕುಂಬಯ್ಯ, ಎನ್. ದಿವಾಕರ್, ಗೀತಾ ಥಾಂವಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್‌ಕುಮಾರ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪನರ‍್ದೇಶಕರಾದ ಮುನಿರಾಜು, ಆಯೋಗದ ಕರ‍್ಯರ‍್ಶಿಗಳಾದ ಡಾ. ಹೆಚ್.ಎಸ್. ಶಿವರಾಮು, ಸಹಾಯಕ ನರ‍್ದೇಶಕರಾದ ಶ್ರೀನಿವಾಸ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು