LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಮ್ಮ ಕುಡಿಯುವ ನೀರು ಸುರಕ್ಷಿತ: 

FSSAI ಕ್ರಮದ ಬೆನ್ನಲ್ಲೇ Bisleri  ಸ್ಪಷ್ಟನೆ..!


ನವದೆಹಲಿ: ಬಿಸ್ಲೆರಿ ಇಂಟರ್‌ನ್ಯಾಷನಲ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಕ್ರಮದ ಬೆನ್ನಲ್ಲೇ, ತನ್ನ ಪ್ಯಾಕೇಜ್ಡ್ ಕುಡಿಯುವ ನೀರು ಸೇವನೆಗೆ ಸುರಕ್ಷಿತವಾಗಿದೆ ಎಂದು ಕಂಪನಿ ಸೋಮವಾರ ಸ್ಪಷ್ಟಪಡಿಸಿದೆ. ಅಲ್ಲದೆ, ಈ ವಿಚಾರವನ್ನು ಬಗೆಹರಿಸಲು ಆಹಾರ ನಿಯಂತ್ರಣ ಪ್ರಾಧಿಕಾರದೊಂದಿಗೆ ಸಹಕರಿಸುವುದಾಗಿ ತಿಳಿಸಿದೆ.ಬಿಸ್ಲೆರಿಯ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿ 'ಅಸುರಕ್ಷಿತ' ಎಂದು ಪತ್ತೆಯಾದ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿರುವುದಾಗಿ ಎಫ್‌ಎಸ್‌ಎಸ್‌ಎಐ ಭಾನುವಾರ ತಿಳಿಸಿತ್ತು. ಇದರ ಬೆನ್ನಲ್ಲೇ ಬಿಸ್ಲೆರಿ ಈ ಸ್ಪಷ್ಟನೆ ನೀಡಿದೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಸ್ಲೆರಿ ಇಂಟರ್‌ನ್ಯಾಷನಲ್, ಎಫ್‌ಎಸ್‌ಎಸ್‌ಎಐನಿಂದ ತನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದೆ. ಅಲ್ಲದೆ, ಉಲ್ಲೇಖಿತ ಮಾದರಿಯಲ್ಲಿ ಬ್ರೋಮೇಟ್ ಅಂಶ ನಿಗದಿತ ಮಿತಿಯೊಳಗೆ ಇದೆ ಎಂದು ಮರುಪರಿಶೀಲನಾ ಪ್ರಯೋಗಾಲಯ ವರದಿ ನೀಡಿದೆ ಎಂದು ತಿಳಿಸಿದೆ.ಕಂಪನಿಯ ಪ್ರಕಾರ, ಈ ಪ್ರಕರಣ ಸುಮಾರು 14 ತಿಂಗಳ ಹಿಂದಿನದು. 2025ರ ಸೆಪ್ಟೆಂಬರ್‌ನಲ್ಲಿ ಗೋವಾದಲ್ಲಿರುವ ಬಿಸ್ಲೆರಿಯ ಉತ್ಪಾದನಾ ಘಟಕದಲ್ಲಿ ತಯಾರಾದ ಒಂದು ಬ್ಯಾಚ್‌ಗೆ ಸಂಬAಧಿಸಿದAತೆ ಈ ವಿವಾದ ಉಂಟಾಗಿದೆ. ಕಂಪನಿಯ ಜಾಲದಲ್ಲಿ ಒಟ್ಟು 143 ಉತ್ಪಾದನಾ ಘಟಕಗಳಿವೆ.
2025ರ ಸೆಪ್ಟೆಂಬರ್ 30ರಂದು ಎಫ್‌ಎಸ್‌ಎಸ್‌ಎಐ ಗೋವಾ ಘಟಕದಿಂದ ಆರು ಮಾದರಿಗಳನ್ನು ಸಂಗ್ರಹಿಸಿತ್ತು. ಆರಂಭಿಕ ಪರೀಕ್ಷೆಯಲ್ಲಿ ಐದು ಮಾದರಿಗಳು ಅನ್ವಯವಾಗುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದವು. ಆದರೆ, ಆರನೇ ಮಾದರಿಯಲ್ಲಿ ಪ್ರತಿ ಲೀಟರ್‌ಗೆ 12 ಮೈಕ್ರೋಗ್ರಾಂ ಬ್ರೋಮೇಟ್ ಪತ್ತೆಯಾಗಿತ್ತು. ನಿಗದಿತ ಮಿತಿ ಪ್ರತಿ ಲೀಟರ್‌ಗೆ 10 ಮೈಕ್ರೋಗ್ರಾಂ ಆಗಿದೆ ಎಂದು ಕಂಪನಿ ವಿವರಿಸಿದೆ.ಇದನ್ನು ಪ್ರಶ್ನಿಸಿ ಬಿಸ್ಲೆರಿ 2025ರ ನವೆಂಬರ್ 22ರಂದು ಮೇಲ್ಮನವಿ ಸಲ್ಲಿಸಿತ್ತು. ಬಳಿಕ ಎಫ್‌ಎಸ್‌ಎಸ್‌ಎಐ ಆ ಮಾದರಿಯನ್ನು ಮರುಪರಿಶೀಲನೆಗಾಗಿ ಉಲ್ಲೇಖಿತ ಪ್ರಯೋಗಾಲಯಕ್ಕೆ ಕಳುಹಿಸಿತ್ತು.ಮರುಪರಿಶೀಲನಾ ಪ್ರಯೋಗಾಲಯದ ಪರೀಕ್ಷೆಯಲ್ಲಿ ಮಾದರಿಯಲ್ಲಿನ ಬ್ರೋಮೇಟ್ ಅಂಶ ನಿಗದಿತ ಮಿತಿಯೊಳಗೆ ಇರುವುದು ಪತ್ತೆಯಾಗಿದೆ. 

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST