LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿಪಕ್ಷ ನಾಯಕರ ಕಿಡಿಕಿಡಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ಅನುಮತಿ ಹಿಂತೆಗೆತಕ್ಕೆ ಆಕ್ರೋಶ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ.

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಕುರಿತು ಎಕ್ಸ್‍ನಲ್ಲಿ ``ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯಲು ಸರ್ಕಾರ ಮರು ಪರಿಶೀಲಿಸಬೇಕು'' ಎಂದಿದ್ದಾರೆ.
ಸಚಿವ ಸಂಪುಟ ದುರ್ಬಳಕೆ ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆ ಶಿವಕುಮಾರ್. ಈ ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದೆ. ಸಿಎಂ ಸಿದ್ದರಾಮಯ್ಯಗೆ ಕುರ್ಚಿ ಮುಖ್ಯ ಹೊರತು ನ್ಯಾಯವಲ್ಲ.

ಉದ್ದುದ್ದ ಭಾಷಣ ಮಾಡುವ ನಾಯಕರಿಗೆ ಇದು ಗೊತ್ತಿಲ್ಲವೇ? ಎಂದು ಕಿಡಿಕಾರಿರುವ ಮಾಜಿ ಸಚಿವ ಕೆ.ಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು ಎಂದಿದ್ದಾರೆ.ಗ್ಯಾರಂಟಿ ಯೋಜನೆ ಹೆಸರಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ.

     

ಇದು ಗೂಂಡಾಗಳಿಗೆ ರಕ್ಷಣೆ ಕೊಡುವ ಸರ್ಕಾರ. ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಪಡೆದು ನಂತರ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡರು. ನನ್ನ ಮೇಲೆ ಆಪಾದನೆ ಬಂತು ನಾನು ರಾಜೀನಾಮೆ ಕೊಟ್ಟೆ. ತಜ್ಞರು ಹೇಳುತ್ತಿದ್ದಾರೆ, ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ. ಆದರೆ ಹಿಂಪಡೆಯಲು ಅನುಮತಿ ಬೇಕಿಲ್ಲವೆಂದು. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ? ಇದು ದೇಶದಲ್ಲೇ ದೊಡ್ಡ ಅಪರಾಧ. ಸಚಿವ ಸಂಪುಟಕ್ಕೆ ಬೆಲೆ ಇಲ್ಲ ಅಂತ ಇವರು ಸಾಬೀತು ಮಾಡಿದರು.

ಸಂವಿಧಾನಕ್ಕೆ ಎಲ್ಲಿ ಬೆಲೆ ಇದೆ ಅಲ್ಲಿ ಸರಿಯಾದ ತೀರ್ಪು ಬರುತ್ತದೆ. ಸಿಬಿಐ ತನಿಖೆ ಹಿಂಪಡೆಯುವುದನ್ನೇ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ಜೈಲಿಗೆ ಹೋಗುತ್ತಾರೆ.

ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಗುಡುಗಿದರು.

ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ. ಹೈಕೋರ್ಟ್‍ನಲ್ಲಿ ಇನ್ನೂಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣವನ್ನು ರಾಜಕೀಯಗೊಳಿ- ಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನ ಬದ್ಧ ಸಂಸ್ಥೆಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಇದೊಂದು ಕೆಟ್ಟ ಸಂದೇಶ ರವಾನೆಯಾಗಿದೆ. ಇದನ್ನು ಸಮಾಜ ಮತ್ತು ನ್ಯಾಯಾಂಗ ಗಮನಿಸುತ್ತದೆ. ಪ್ರತಿರೋಧ ಬರುವ ತೀರ್ಪು ಬಂದರೇ ಅಚ್ಚರಿ ಪಡಬೇಕಿಲ್ಲ. ಅವರ ತಪ್ಪುನ್ನು ಮುಚ್ಚಿಕೊಳ್ಳುವುದಕ್ಕೆ ಹೋರಟಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು