LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

೧೩೧ ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ

ನವದೆಹಲಿ: ಗಣರಾಜ್ಯೋತ್ಸವದ ಮುನ್ನಾದಿನದಂದು, ಸರ್ಕಾರವು ೨೦೨೬ರ ೧೩೧ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಕೇರಳದ ಮಾಜಿ ಸಿಎಂ ಮತ್ತು ಹಿರಿಯ ಕಮ್ಯುನಿಸ್ಟ್ ನಾಯಕ ವಿ.ಎಸ್. ಅಚ್ಯುತಾನಂದನ್ ಮತ್ತು ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣವನ್ನು ನೀಡಲಾಗಿದೆ.
ಒಟ್ಟು ೧೩೧ ಪದ್ಮಗಳಲ್ಲಿ ೫ ಪದ್ಮವಿಭೂಷಣ, ೧೩ ಪದ್ಮಭೂಷಣ ಮತ್ತು ೧೧೩ ಪದ್ಮಶ್ರೀ ಸೇರಿವೆ. ಇದರಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ಒಂದಾಗಿ ಪರಿಗಣಿಸಲಾದ ೨ ಪ್ರಸಂಗಳಿವೆ.
ರಾಜೀವ್ ಗಾಂಧಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಕೆ.ಟಿ. ಥಾಮಸ್, ಕಲೆಯಲ್ಲಿ ಹಿಂದುಸ್ತಾನಿ ಶಾಸ್ತಿçÃಯ ಸಂಗೀತಗಾರ ಮತ್ತು ಪಿಟೀಲು ವಾದಕ ಎನ್. ರಾಜಮ್, ಸಾಹಿತ್ಯ ಮತ್ತು ಶಿಕ್ಷಣದಲ್ಲಿ ಖ್ಯಾತ ಮಲಯಾಳಂ ಪತ್ರಕರ್ತ ಪಿ. ನಾರಾಯಣನ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಭಗತ್ ಸಿಂಗ್ ಕೋಶ್ಯಾರಿ, ನಟ ಮಮ್ಮುಟ್ಟಿ ಮತ್ತು ಬ್ಯಾಂಕರ್ ಉದಯ್ ಕೋಟಕ್ ಅವರು ಪದ್ಮಭೂಷಣ ಪ್ರಶಸ್ತಿ ವಿಜೇತರಲ್ಲಿ ಸೇರಿದ್ದಾರೆ.ಜಾಹೀರಾತು ಗುರು ಪೀಯೂಷ್ ಪಾಂಡೆ, ಜೆಎಂಎA ಸಂಸ್ಥಾಪಕ ಶಿಬು ಸೊರೆನ್ ಮತ್ತು ಬಿಜೆಪಿ ನಾಯಕ ವಿ.ಕೆ. ಮಲ್ಹೋತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದ್ದು, ಹಾಸ್ಯನಟ ಸತೀಶ್ ಶಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಜೆಎನ್‌ಯು ಮಾಜಿ ವಿಸಿ ಎಂ. ಜಗದೀಶ್ ಕುಮಾರ್, ಪ್ರಸಾರ ಭಾರತಿ ಮಾಜಿ ಸಿಇಒ ಶಶಿ ಶೇಖರ್ ವೆಂಪಾಟಿ ಮತ್ತು ನಟರಾದ ಆರ್. ಮಾಧವನ್ ಮತ್ತು ಪ್ರೊಸೇನ್‌ಜಿತ್ ಚಟರ್ಜಿ ಸಹ ಪದ್ಮಶ್ರೀ ಪ್ರಶಸ್ತಿ ಪಡೆದವರಲ್ಲಿ ಸೇರಿದ್ದಾರೆ.
ಕ್ರೀಡಾ ಕೆಟಗರಿ: ಕ್ರೀಡಾ ಕೆಟಗರಿಯಲ್ಲಿ ಟೆನಿಸ್ ದಂತಕಥೆ ವಿಜಯ್ ಅಮೃತರಾಜ್ ಅವರಿಗೆ ಪದ್ಮಭೂಷಣ. ಕ್ರಿಕೆಟಿಗ ರೋಹಿತ್ ಶರ್ಮಾ, ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಹಾಕಿ ಆಟಗಾರ್ತಿ ಸವಿತಾ ಪುನಿಯಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
೧೩೧ ಪುರಸ್ಕöÈತರಲ್ಲಿ ೯೦ ಮಹಿಳೆಯರು!ಪ್ರಶಸ್ತಿ ಪುರಸ್ಕöÈತರಲ್ಲಿ ಮಹಿಳೆಯರಿಗೆ ಸಿಂಹಪಾಲು ಹೋಗಿದೆ. ಒಟ್ಟು ೯೦ ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ ೧೬ ಮರಣೋತ್ತರ ಪ್ರಶಸ್ತಿ ಪುರಸ್ಕöÈತರು ಸೇರಿದ್ದಾರೆ. ವಿದೇಶಿಗರ ವರ್ಗದಲ್ಲಿ ೬ ಅನಿವಾಸಿ ಭಾರತೀಯರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು