LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬಸವ ಜಯಂತಿ ಅಂಗವಾಗಿ ರಾಸುಗಳ ಮೆರವಣಿಗೆ

ಕೆ.ಆರ್.ನಗರ: ಈ ದೇಶದ ಬೆನ್ನಲುಬು ರೈತನಾದರೆ ರೈತನ ಉಸಿರು ಜಾನುವಾರುಗಳಾಗಿದ್ದು 12ನೇ ಶತಮಾನದ ಬಸವಣ್ಣನವರು ಜನ್ಮದಿನಾಚರಣೆಯನ್ನು ಬಸವ ಜಯಂತಿ ಎಂದು ಆಚರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅಧ್ಯಕ್ಷ ರಾಘವೇಂದ್ರ ಹೇಳಿದರು. ಪಟ್ಟಣದ ಆಂಜನೇಯ ಬಡಾವಣೆಯ ಶ್ರೀ ಆಂಜನೇಯಸ್ವಾಮಿ ಆವರಣದಲ್ಲಿರುವ ಶ್ರೀ ಬಸವೇಶ್ವರ ರೈತ ಗಾಡಿ ಸಂಘದ ವತಿಯಿಂದ 48ನೇ ವರ್ಷದ ಬಸವ ಜಯಂತಿ ಆಚರಣೆ ರಾಸುಗಳ ಮೆರವಣಿಗೆ ಚಾಲನೆ ನೀಡಿ ಮಾತನಾಡಿದ ಅವರು ಇಂದು ರೈತ ರಾಸುಗಳಿಗೆ ಮೇವು ಸಿಗುತ್ತಿಲ್ಲ, ರೈತ ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯಿಲ್ಲದೆ ದಲ್ಲಾಳಿಗಳ ಕಪಿಮುಷ್ಠಿಯಲ್ಲಿ ಸಿಲುಕ್ಕಿ ಆತ್ಮಹತ್ಯೆಗೆ ಶರಣಾಗುತ್ತಿರವುದು ಬೇಸರ ತಂದಿದ್ದು ಇದರ ಜತೆಗೆ ರೈತ ಬೆಳೆ ಸಾಲ ನೀಡುವಲ್ಲಿ ಸಹಕಾರಿ ಬ್ಯಾಂಕ್‌ಗಳು ಸರಿಯಾಗಿ ಸ್ಪಂದಿಸದಿರುವುದು ಮತ್ತು ಇಂದಿನ ಆಧುನಿಕ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರಮಾಣದಲ್ಲಿ ರೈತ ತೊಡಗಿಸಿಕೊಳ್ಳುತ್ತಿರುವುದರಿಂದ ಇಂದು ರೈತನ ಪರಿಸ್ಥಿತಿ ತೀರ ಕುಸಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಸಂಘದ ವತಿಯಿಂದ ಪ್ರತಿ ವರ್ಷ ಬಸವ ಜಯಂತಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುವುತ್ತಿರುವುದಾಗಿ ಕಾರ್ಯದರ್ಶಿ ಅಶ್ವಥ್‌ನಾರಾಯಣ್ ತಿಳಿಸಿದರು. ಬಸವ ಜಯಂತಿಯ ದಿನದಂದು ಬೆಳಿಗ್ಗೆ ಆಂಜನೇಯಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ ಮತ್ತು ಬೆಣ್ಣೆ ಅಲಂಕಾರ ಮಾಡಿ ಆಂಜನೇಯ ಸ್ವಾಮಿ ದೇವರಿಗೆ ವಿಶೇಷ ಪೂಜೆಯೊಂದಿಗೆ ಮಧ್ಯಾಹ್ನ 3.00 ಗಂಟೆಗೆ ರಾಸುಗಳ ಮೆರವಣಿಯನ್ನು ನಗರದ ಬಜಾರ ರಸ್ತೆ, 7ನೇ ರಸ್ತೆಯ ಮೂಲಕ ಬಸವೇಶ್ವರ ಬ್ಲಾಕಿನಲ್ಲಿರುವ ಬಸವೇಶ್ವರ ಮತ್ತು ಮಹಾದೇಶ್ವರ ದೇವಸ್ಥಾನದ ಮೂಲಕ ಗರುಡಗಂಭ ವೃತ್ತ, ವಿ.ವಿ.ರಸ್ತೆ ಮೂಲಕ ಪುರಸಭಾ ವೃತ್ತ ದಿಂದ ಸಿ.ಎಂ. ರಸ್ತೆಯ ಮೂಲಕ ವಿವಿಧ ಜಾನಪದ ಕಲಾತಂಡಗಳು, ಡೊಳ್ಳುಕುಣಿತ, ವೀರಗಾಸೆ, ಮಂಗಳವಾದ್ಯದೊAದಿಗೆ ರಾಸುಗಳ ಮೆರವಣಿಗೆ ನಡೆಸಿ ಸಂಜೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಮಾಡಲಾಯಿತು ಎಂದರು. ಬಸವ ಜಯಂತಿಯ ಆಚರಣೆಯ ರಾಸುಗಳ ಮೆರವಣಗೆಯಲ್ಲಿ ರೈತ ಗಾಡಿ ಸಂಘದ ಪದಾಧಿಕಾರಿಗಳಾದ ಕೇಶವಮೂರ್ತಿ, ಗೋವಿಂದೇಗೌಡ, ನಾರಾಯಣ್‌ನಾಯಕ್, ಜಗದೀಶ್, ದೇವರಾಜು, ಶಂಕರ್, ಗಜೇಂದ್ರ, ಕುಳ್ಳೇಗೌಡ, ರವಿ, ರಮೇಶ್, ಅಶೋಕ್, ಕುಮಾರ, ರಾಮಿ, ಸಚ್ಚಿನ್, ವಿನಯ್ ಸೇರಿದಂತೆ ರೈತ ಮುಖಂಡರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು