LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರ : ಕೆಎನ್. ರಾಜಣ್ಣ"

ಬೆಂಗಳೂರು: ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರ ಇದ್ದೇನೆ. ಬದಲಾವಣೆ ಅಂತ ಬಂದರೆ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಪರ ಬ್ಯಾಟ್ ಬೀಸಿದ್ದಾರೆ. ಕಾಂಗ್ರೆಸ್ ಕುರ್ಚಿ ಕದನ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಕೂಲಿ ಕೇಳೋದಿದ್ದರೆ ಪರಮೇಶ್ವರ್ ೨೦೧೩ರಲ್ಲಿ ಪಕ್ಷ ಅಧಿಕಾರಕ್ಕೆ ತಂದರು. ಪರಮೇಶ್ವರ್ ಅವರದ್ದು ಹಳೆ ಕೂಲಿ, ಇವರದ್ದು ಹೊಸ ಕೂಲಿ. ಮೊದಲು ಹಳೆ ಕೂಲಿ ತೀರಿಸಬೇಕೋ ಅಥವಾ ಹೊಸ ಸಾಲ ತೀರಿಸಬೇಕೋ? ಡಿಕೆಶಿ ಬಣದಿಂದ ದೆಹಲಿ ಪರೇಡ್ ಯಾಕೆ ಅಂತ ಅವರನ್ನೇ ಕೇಳಬೇಕು. ಪರಮೇಶ್ವರ್ ಸಿಎಂ ಸ್ಥಾನ ಕೇಳೋದು ತಪ್ಪಲ್ಲ. ೨೦೧೩ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರ ಕೂಲಿ ಬಾಕಿ ಇದೆ. ಡಿಕೆಶಿ ಸಿಎಂ ಸ್ಥಾನದ ಡಿಮ್ಯಾಂಡ್ ಮಾಡಿದ್ರೆ ಪರಮೇಶ್ವರ್‌ಗೆ ಮೊದಲು ಸಿಎಂ ಸ್ಥಾನ ಕೊಡಬೇಕು ಎಂದು ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ.
ಹೈಕಮಾಂಡ್ ಬೇಗ ಸಮಸ್ಯೆ ಇತ್ಯರ್ಥ ಮಾಡಲಿ. ಇಲ್ಲದೆ ಹೋದರೆ ಸರ್ಕಾರ ವಿಸರ್ಜನೆ ಮಾಡಿ ಡಿಕೆಶಿ ನೇತೃತ್ವದಲ್ಲಿ ಚುನಾವಣೆ ಹೋಗಲಿ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಮತ್ತೆ ಅಧಿಕಾರಕ್ಕೆ ತರೋಣ. ಯಾರಾದರೂ ನಮ್ಮಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂದರೆ ಅವರು ಹುಚ್ಚರು. ಮೆಂಟಲ್‌ಗಳು ಎಂದು ಡಿಕೆಶಿ ಹಾಗೂ ಟೀಂ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು. ಶಾಸಕರು ದೆಹಲಿಗೆ ಹೋಗಿರೋದು ಮಂತ್ರಿ ಸ್ಥಾನಕ್ಕೆ ಗಾಡ್ ಫಾದರ್‌ಗಳ ಮೂಲಕ ಲಾಬಿ ಮಾಡಲು. ಸಿದ್ದರಾಮಯ್ಯ ಸಿಎಂ ಆಗಿರೋದು ಬಿಡೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂದು ನನಗೆ ಅನಿಸಲ್ಲ. ಅವರೇ ಮುಂದುವರೆಯುತ್ತಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು