LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದಂಧೆಕೋರರ ಆಸ್ತಿ ಮುಟ್ಟುಗೋಲು: ಪರಮೇಶ್ವರ

ನೆಲಮಂಗಲ: ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.ಬೆಂಗಳೂರು ಗ್ರಾ. ಜಿಲ್ಲೆಯ ಡಾಬಸ್‍ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್‍ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ ನಡೆದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ‘ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಂಜಾಬ್‍ನಲ್ಲಿ ಪ್ರತಿಯೊಬ್ಬ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದಾರೆ. ಮಾದಕವಸ್ತು ಬೆರೆಸಿದ ಚಾಕೋಲೆಟ್ ಮಾರುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಡ್ರಗ್ಸ್ ವ್ಯಸನಕ್ಕೆ ಅಂಟಿಸುವುದು ದಂಧೆಕೋರರ ಉದ್ದೇಶವಿರಬಹುದು. ಇದಕ್ಕೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಈ ನಿಟ್ಟಿನಲ್ಲಿ ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಲು ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದರು.
ಡ್ರಗ್ಸ್ ದಂಧೆ ವಿಶ್ವದ ಜನ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಮಾದಕ ವಸ್ತುಗಳು ಇಡೀ ಸಮಾಜವನ್ನು ನಾಶ ಮಾಡುತ್ತಿದೆ. ವಿಶೇಷವಾಗಿ ಯುವಕರ ಜೀವನ ಹಾಳು ಮಾಡುತ್ತಿವೆ. ಒಳ್ಳೆಯ ಸಮಾಜ ನಿರ್ಮಾಣ ಮಾಡುವ ಸಂದರ್ಭದಲ್ಲಿ ಬಹಳಷ್ಟು ದೊಡ್ಡ ಸವಾಲಾಗಿ ನಿಂತಿದೆ ಎಂದು ಹೇಳಿದರು.

ವಿಶ್ವಕ್ಕೆ ಸವಾಲಾಗಿರುವ ಡ್ರಗ್ಸ್ ದಂದೆಯನ್ನು ಎದುರಿಸುವಲ್ಲಿ ಕೆಲ ಸಣ್ಣ ರಾಷ್ಟ್ರಗಳು ಸೋತು ಕೈಚೆಲ್ಲಿ ನಿಂತಿವೆ. ಹಾಲೆಂಡ್, ಸ್ವಿಟ್ಜರ್ಲೆಂಡ್ ಸೇರಿದಂತೆ ಇನ್ನು ಕೆಲದೇಶಗಳು ಏನಾದರಾಗಲಿ ಎಂಬಂತೆ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದನ್ನು ನಿಲ್ಲಿಸಿ, ಸೋಲನ್ನು ಒಪ್ಪಿಕೊಂಡಿವೆ. ಇಂತಹ ದುಸ್ಥಿತಿ ನಮ್ಮ ದೇಶಕ್ಕೆ ಬರಬಾರದು. ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದರು.

ಪ್ರಬಲ ರಾಷ್ಟ್ರಗಳು ಯಾವುದೇ ಕಾರಣಕ್ಕು ಡ್ರಗ್ಸ್ ಯುವಕರ ಕೈಗೆ ಸಿಗಬಾರದು ಎಂಬ ನಿಟ್ಟಿನಲ್ಲಿ ಯುದ್ಧದ ರೀತಿ ಭಾವಿಸಿ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ಡ್ರಗ್ ಮಟ್ಟ ಹಾಕಬೇಕು. ಈಗಾಗಲೇ ಮಂಡ್ಯ, ಮೈಸೂರು, ಗದಗ ಜಿಲ್ಲೆಗಳು ಡ್ರಗ್ಸ್ ದಂಧೆ ನಿಯಂತ್ರಿಸುವಲ್ಲಿ ಮುಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‍ಪಿ) ಸವಾಲಾಗಿ ಸ್ವೀಕರಿಸಿ ಜಿಲ್ಲಾ ಮಟ್ಟದಿಂದಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇದೊಂದು ಗಂಭೀರ ವಿಚಾರವಾಗಿದ್ದು. ಡ್ರಗ್ಸ್ ಸೇವಿಸುವರು ಮಾನಸಿಕ ತೊಂದರೆ ಜೊತೆಗೆ ಪ್ರಾಣವನ್ನೇ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಾರೆ. ಇದನ್ನು ನಿರ್ಲಕ್ಷಿಸಿದರೆ ಸಮಾಜ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತದೆ. ವಿದೇಶದಿಂದ ಬರುವ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದಾರೆ. ಆಫ್ರಿಕಾದವರು ಹೆಚ್ಚಾಗಿ ಅಕ್ರಮ ಚಟುವಟಿಕೆಯಲ್ಲಿ ತೊಡಗುತ್ತಿದ್ದು, ಇದನ್ನು ಮಟ್ಟ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಘೋಷಿಸಲಾಗಿದೆ. ಡ್ರಗ್ಸ್ ಪರೀಕ್ಷಿಸುವ ಕಿಟ್, ಪೊಲೀಸರಿಗೆ ವಿಶೇಷ ತರಬೇತಿ, ಕಾನೂನು ಭದ್ರಪಡಿಸುವ ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಯ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದು ಕಳೆದ ಒಂದು ವರ್ಷದ ಅಂಕಿ-ಅಂಶದಿಂದ ಗೊತ್ತಾಗುತ್ತದೆ. ಕಾರ್ಯಾಚರಣೆ ಹೀಗೆ ನಿರಂತರವಾಗಿ ಮುಂದುವರಿಯಬೇಕು ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಎಡಿಜಿಪಿ (ಕ್ರೈಮ್) ಉಮೇಶ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ, ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಕೇಂದ್ರ ಮತ್ತು ದಕ್ಷಿಣ ವಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು