LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸ್ಫೋಟಕ ಶತಕ ಸಿಡಿಸಿದ ಪಾಟಿದಾರ್

ಅಹದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂ ಬಿ ಗ್ರೌಂಡ್‍ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ಬ್ಯಾಟರ್ ರಜತ್ ಪಾಟಿದಾರ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಎರಡು ದಿನಗಳ ಈ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಲಯನ್ಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಯನ್ಸ್ ಪರ ಡಾನ್ ಮೌಸ್ಲಿ (60) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ಲಯನ್ಸ್ ತಂಡವು ಮೊದಲ ಇನಿಂಗ್ಸ್‍ನಲ್ಲಿ 233 ರನ್‍ಗಳಿಸಿ ಆಲೌಟ್ ಆಯಿತು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಅಭಿಮನ್ಯು ಈಶ್ವರನ್ ಹಾಗೂ ರಜತ್ ಪಾಟಿದಾರ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‍ಗೆ 73 ರನ್ ಪೇರಿಸಿ ಅಭಿಮನ್ಯು ಈಶ್ವರನ್ (32) ಔಟಾದರು. ಮತ್ತೊಂದೆಡೆ ಅದ್ಭುತ ಇನಿಂಗ್ಸ್ ಆಡಿದ ರಜತ್ ಪಾಟಿದಾರ್ ಇಂಗ್ಲೆಂಡ್ ಲಯನ್ಸ್ ಬೌಲರ್‍ಗಳ ಬೆಂಡೆತ್ತಿದರು. ಅಲ್ಲದೆ, 141 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 18 ಫೋರ್‍ಗಳೊಂದಿಗೆ 111 ರನ್ ಬಾರಿಸಿ ಔಟಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು