LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಸುಳ್ಳುಗಳಿಗೆ ಜನತೆ ಸರ್ಟಿಫಿಕೇಟ್

ಬೆಂಗಳೂರು: ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು.

ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ , ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದರು.

ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು