LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವಿದೇಶದಲ್ಲಿ ನೀರಜ್ ತರಬೇತಿ ಪಡೆಯಲು ಅನುಮತಿ

ನವದೆಹಲಿ: ಪ್ಯಾರಿಸ್ ಕ್ರೀಡಾಕೂಟಕ್ಕೆ ಸಿದ್ಧತೆಯಾಗಿ ಜಾವೆಲಿನ್ ಥ್ರೋಪಟು ನೀರಜ್ ಚೋಪ್ರಾ ಅವರು ಕೋಚ್ ಕ್ಲಾಸ್ ಬಾರ್ಟೋನಿಯೆಟ್ಜ್ ಮತ್ತು ಫಿಸಿಯೋ ಇಶಾನ್ ಮಾರ್ವಾಹಾ ಅವರೊಂದಿಗೆ 60 ದಿನ ಯುರೋಪ್‍ನಲ್ಲಿ ತರಬೇತಿ ಪಡೆಯಲು ಕ್ರೀಡಾ ಸಚಿವಾಲಯ ಗುರುವಾರ ಅನುಮೋದನೆ ನೀಡಿದೆ.

ಜೂನ್ 10 ರಿಂದ 21 ರ ವರೆಗೆ ಹಂಗೇರಿಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಸ್ಟ್ರೆಂಥ್ ಮತ್ತು ಕಂಡಿಷನಿಂಗ್ ಕೋಚ್ ವೇಯ್ನ್ ಪ್ಯಾಟ್ರಿಕ್ ಲೊಂಬಾರ್ಡ್ ಅವರನ್ನು ಸೇರಿಸಿಕೊಳ್ಳಲು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶಾ ಫೋಗಾಟ್ ಅವರ ಪ್ರಸ್ತಾಪಕ್ಕೆ ಸಚಿವಾಲಯದ ಮಿಷನ್ ಒಲಿಂಪಿಕ್ ಸೆಲ್ (ಎಂಒಸಿ) ಒಪ್ಪಿಕೊಂಡಿದೆ.

ಮೂರು ವರ್ಷಗಳ ಹಿಂದೆ ಟೋಕಿಯೊದಲ್ಲಿ ನಡೆದ ಒಲಿಂಪಿಕ್ಸ್‍ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಚೋಪ್ರಾ ಮೇ 29 ರಿಂದ ಜುಲೈ 28 ರವರೆಗೆ ಯುರೋಪ್‍ನ ವಿವಿಧ ಸ್ಥಳಗಳಲ್ಲಿ ತರಬೇತಿ ಪಡೆಯಲಿದ್ದಾರೆ.

ಕ್ರೀಡಾ ಸಚಿವಾಲಯದ ಟಾರ್ಗೆಟ್ ಒಲಂಪಿಕ್ ಪೋಡಿಯಂ ಸ್ಕೀಮ್ ಅಡಿಯಲ್ಲಿ ಅವರ ಈ ವಿದೇಶಿ ತರಬೇತಿಯ ವೆಚ್ಚವನ್ನು ಭರಿಸಲಾಗುತ್ತದೆ.
ಪ್ಯಾರಿಸ್‍ನಲ್ಲಿ 50 ಕೆ.ಜಿ ತೂಕದ ವಿಭಾಗದಲ್ಲಿ ವಿನೇಶಾ ಸ್ಪರ್ಧಿಸಲಿದ್ದಾರೆ. ಬುಡಾಪೆಸ್ಟ್‍ನಲ್ಲಿ ಜೂನ್ 6 ರಿಂದ 9 ರವರೆಗೆ ನಡೆಯಲಿರುವ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ 2ನೇ ರ್ಯಾಂಕಿಂಗ್ ಸರಣಿ - ಪೆÇಲಿಯಾಕ್ ಇಮ್ರೆ ಮತ್ತು ವರ್ಗಾ ಜಾನೋಸ್ ಮೆಮೋರಿಯಲ್‍ನಲ್ಲಿ ಅವರು ಸ್ಪರ್ಧಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು