LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಓಂಪ್ರಕಾಶ್ ರಾವ್ ನಿರ್ದೇಶನದ "ಫೀನಿಕ್ಸ್" ಚಿತ್ರ ಆರಂಭ

"ಲಾಕಪ್ ಡೆತ್", " Ak 47  " ಮಂಡ್ಯ", "ಹುಬ್ಬಳ್ಳಿ" ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ "ಫೀನಿಕ್ಸ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಎನ್ ಸೋಮೇಶ್ವರ್ ಜ್ಯೋತಿ ಬೆಳಗುವ ಮೂಲಕ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು.

ಬೇಬಿ ಕೃಷಿ ಆರಂಭ ಫಲಕ ತೋರಿದರು. ಎ.ಎಂ ಉಮೇಶ್ ರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು "ಫೀನಿಕ್ಸ್" ಚಿತ್ರದ ಬಗ್ಗೆ ಮಾಹಿತಿ ನೀಡಿದರು.ಇದೊಂದು ಮಹಿಳಾ ಪ್ರಧಾನ ಚಿತ್ರ. ರಿಮೇಕ್ ಚಿತ್ರಗಳಿಗೆ ಬ್ರೇಕ್ ಹಾಕಿ ಸ್ವಮೇಕ್ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದೇನೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕಿಯರಾಗಿ ನಿಮಿಕಾ ರತ್ನಾಕರ್, ಕೃತಿಕಾ ಲೋಗೊ, ತನುಷಾ ರಜಪುತ್ ನಟಿಸುತ್ತಿದ್ದಾರೆ. ಭಾಸ್ಕರ್ ಶೆಟ್ಟಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟ್ ಗೌಡ ಅರ್ಪಿಸುತ್ತಿರುವ ಈ ಚಿತ್ರವನ್ನು ತ್ರಿಶಾ ಪ್ರಕಾಶ್ ಶ್ರೀ ಗುರು ಚಿತ್ರಾಲಯ ಬ್ಯಾನರ್ ನಲ್ಲಿ ನಿರ್ಮಿಸುತ್ತಿದ್ದಾರೆ. ಬೆಂಗಳೂರು, ಜರ್ಮನ್ ಹಾಗೂ ಆಸ್ಟ್ರೀಯಾ ದಲ್ಲಿ ಚಿತ್ರೀಕರಣ ನಡೆಯಲಿದೆ. ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದು ನನ್ನ ನಿರ್ದೇಶನದ 49ನೇ ಚಿತ್ರ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದರು.ಚಿತ್ರದ ಶೀರ್ಷಿಕೆ ಕೇಳಿ ನನಗೆ ಈ ಚಿತ್ರದಲ್ಲಿ ನಟಿಸುವ ಆಸೆಯಾಯಿತು. ಕಥೆ ಕೇಳಿದ ಮೇಲಂತೂ ಬಹಳ ಖುಷಿಯಾಯಿತು. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ಹೇಳಿದರು ನಿಮಿಕಾ ರತ್ನಾಕರ್.

ನಾನು ಈ ಹಿಂದೆ ಓಂಪ್ರಕಾಶ್ ರಾವ್ ಅವರ ನಿರ್ದೇಶನ ಎರಡು ಚಿತ್ರಗಳಲ್ಲಿ ನಟಿಸಿದ್ದೆ. ಇದು ಮೂರನೇ ಚಿತ್ರ. ಈ ಚಿತ್ರದಲ್ಲೂ ನನ್ನ ಪಾತ್ರ ಚೆನ್ನಾಗಿದೆ ಎಂದರು ಮತ್ತೊಬ್ಬ ನಾಯಕಿ ಕೃತಿಕ ಲೋಗೊ.ನಾನು ಈವರೆಗೂ ತೊಂಭತ್ತು ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದಲ್ಲಿ ನಿರ್ದೇಶಕರು ಪ್ರಮಖಪಾತ್ರ ನೀಡಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರ ನನ್ನದು ಎನ್ನುತ್ತಾರೆ ಭಾಸ್ಕರ್ ಶೆಟ್ಟಿ.

ಚಿತ್ರದಲ್ಲಿ ನಟಿಸುತ್ತಿರುವ ಕಾಕ್ರೋಜ್ ಸುಧೀ, ವಿನೋದ್ ಕಿನ್ನಿ, ರೋಬೊ ಗಣೇಶ್, ಆರ್ಯನ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ವಿತರಕ ವೆಂಕಟ್ ಗೌಡ ಚಿತ್ರಕ್ಕೆ ಶುಭ ಕೋರಿದರು.ನಾನು ಹಾಗೂ ಓಂಪ್ರಕಾಶ್ ರಾವ್ ಮೂವತ್ತು ವರ್ಷದ ಗೆಳೆಯರು. ಓಂಪ್ರಕಾಶ್ ರಾವ್ ನಿರ್ದೆಶನದ ಬಹುತೇಕ ಚಿತ್ರಗಳಿಗೆ ನಾನೇ ಸಂಭಾಷಣೆ ಬರೆದಿದ್ದೇನೆ ಈ ಚಿತ್ರಕ್ಕೂ ಬರೆಯುತ್ತಿದ್ದೇನೆ ಎಂದರು ಎಂ.ಎಸ್ ರಮೇಶ್.

ಸಾಧುಕೋಕಿಲ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ, ವಿಜಯನ್ ಸಾಹಸ ನಿರ್ದೇಶನ ಹಾಗೂ ರಾಮಚಂದ್ರ ಅವರ ನಿರ್ಮಾಣ ನಿರ್ವಹಣೆ "ಫೀನಿಕ್ಸ್" ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು