LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟೀಸರ್‌ನಲ್ಲೇ ಪಿನಾಕ ಮೋಡಿ

ವಿಶ್ವಪ್ರಸಾದ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ನಿರ್ದೇಶನದ ಹಾಗೂ ಗಣೇಶ್ ಅಭಿನಯದ `ಪಿನಾಕ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳೊಂದಿಗೆ ಗಣೇಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದರೊಟ್ಟಿಗೆ " ಪಿನಾಕ" ಚಿತ್ರದ ಟೀಸರ್ ಸಹ ಅನಾವರಣವಾಯಿತು. ನಾನು ಹಲವು ವರ್ಷಗಳಿಂದ ನೃತ್ಯ ನಿರ್ದೇಶಕನಾಗಿ ಚಿತ್ರರಂಗದಲ್ಲಿದ್ದೇನೆ. ಈ ಸಿನಿಮಾ ಮೂಲಕ ನಿರ್ದೇಶಕ ಆಗುತ್ತಿರುವೆ ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಗಣೇಶ್ ಅವರಿಗೆ ಧನ್ಯವಾದ. ಇನ್ನೂ, ನಾನು ಈವರೆಗೂ "ಪಿನಾಕ" ಚಿತ್ರದ ಕರಿತು ಹೆಚ್ಚು ಮಾತನಾಡಿರಲಿಲ್ಲ. ಏಕೆಂದರೆ ನಾನು ಮಾತಾಡುವುದು ಬೇಡ ಕೆಲಸ ಮಾತನಾಡಲಿ ಎಂದು. ಈಗ ಟೀಸರ್‌ಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿ ಮನತುಂಬಿ ಬಂದಿದೆ. ಟೀಸರ್ ನಲ್ಲಿ ಹೆಚ್ಚು ಹೇಳಿಲ್ಲ. ಕೇವಲ 30% ಮಾತ್ರ ಚಿತ್ರದ ಕುರಿತು ಹೇಳಿದ್ದೇವೆ. ಚಿತ್ರದಲ್ಲಿ ಇನ್ನೂ ಬಹಳಷ್ಟಿದೆ. ಅಧ್ಯಾತ್ಮಿಕತೆಗೆ ಹೆಚ್ಚು ಒತ್ತು ಕೊಡಲಾಗಿದೆ. ಮುಂಬರುವ ಟ್ರೇಲರ್ ನಲ್ಲೂ ಚಿತ್ರದ ಕುರಿತು ಇನ್ನಷ್ಟು ತಿಳಿಸುವುದಾಗಿ ನಿರ್ದೇಶಕ ಧನಂಜಯ್ ಹೇಳಿದರು. "ಮುಂಗಾರು ಮಳೆ"ಯಿಂದ ನಾಯಕ ನಾಗಿ ಶುರುವಾದ ನನ್ನ ಸಿನಿ ಜರ್ನಿ ಈ ಹಂತ ತಲುಪಲು ದೇವರ, ತಂದೆ - ತಾಯಿ ಹಾಗೂ ಅಭಿಮಾನಿಗಳ ಆಶೀರ್ವಾದವೇ ಕಾರಣ. ಇನ್ನೂ, ನನ್ನ ಮಕ್ಕಳು "ಕಾರ್ತಿಕೇಯ 2" ಚಿತ್ರವನ್ನು ನೋಡಿದಾಗ, ನೀವು ಈತರಹದ ಚಿತ್ರದಲ್ಲಿ ಅಭಿನಯಿಸಬೇಕೆಂದು ಹೇಳುತ್ತಿದ್ದರು. ನಾನು ಶಿವ ಭಕ್ತ. "ಪಿನಾಕ" ಸಹ ಶಿವನ ಕುರಿತಾದ ಚಿತ್ರ. ಇಂತಹ ಚಿತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ.
ಈ ಚಿತ್ರದ ಕುರಿತು ನಿರ್ಮಾಪಕರು ನನ್ನ ಬಳಿ ಮಾತನಾಡಿದಾಗ, ಈ ಕಥೆ ಬಹಳ ಬಜೆಟ್ ಕೇಳುತ್ತದೆ. ನಿಮಗೆ ಹೊರೆಯಾಗಬಾರದು ಎಂದು ಹೇಳಿದೆ. ಅವರು ಇಲ್ಲ ಕಥೆ ಕೇಳುವ ಬಜೆಟ್ ಹಾಕಲು ನಾವು ಸಿದ್ದರಿದ್ದೇವೆ ಎಂದರು. ಈ ಚಿತ್ರದ ಚಿತ್ರೀಕ ರಣದಲ್ಲಿ ಸಾವಿರಾರು ಜನರು ಭಾಗಿ ಯಾಗುತ್ತಿದ್ದರು. ಕ್ಲೈಮ್ಯಾಕ್ಸ್ ಅಂತು ನಾನು ಈವರೆಗೂ ಯಾವ ಚಿತ್ರದಲ್ಲೂ ನೋಡಿರದ ಕ್ಲೈಮ್ಯಾಕ್ಸ್ ಎನ್ನಬಹುದು.
12 ನಿಮಿಷಗಳ ಕ್ಲೈಮ್ಯಾಕ್ಸ್ ಗೆ 22 ದಿನಗಳ ಚಿತ್ರೀಕರಣ ಮಾಡಿದ್ದೇವೆ. "ಪಿನಾಕ", ಚಾರುಕೇಶ ರಾಜನ ಕಥೆ. ಈ ಚಿತ್ರ ಚೆನ್ನಾಗಿ ಮೂಡಿಬರಲು ತಂಡದ ಸಹಕಾರವೇ ಕಾರಣ. ಈ ಚಿತ್ರದಲ್ಲಿ ನಟಿಸಿರುವ ಶ್ರೀನಿವಾಸಮೂರ್ತಿ, ರಂಗಾಯಣ ರಘು, ಸಾಧುಕೋಕಿಲ ಅವರಂತಹ ಹಿರಿಯ ಕಲಾ ವಿದರಿಂದ ಸಾಕಷ್ಟು ಕಲಿತಿದ್ದೇನೆ. ಅ.2ರಂದು ತೆರೆಗೆ ಬರುತ್ತಿರುವ ಈ ಚಿತ್ರ ನೋಡುಗರಿಗೆ ಮನೋರಂಜನೆಯ ರಸದೌತಣ ನೀಡಲಿದೆ ಎಂದ ನಾಯಕ ಗಣೇಶ್. ಕಲಾವಿದರಾದ ರಂಗಾಯಣ ರಘು ಹಾಗೂ ಸಾಧುಕೋಕಿಲ ಅವರು "ಪಿನಾಕ" ಚಿತ್ರದ ಚಿತ್ರೀಕರಣದ ಅನುಭವ ಹಂಚಿಕೊAಡರು. ನಾಯಕಿ ಅರ್ಚ ನಾ ಅಯ್ಯರ್ ಮಾತನಾಡಿ ಒಂದೊಳ್ಳೆ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು